Siddaramaiah Press Meet Live: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ರಾಜ್ಯ ಸರ್ಕಾರ

|

Updated on: Mar 23, 2024 | 3:54 PM

ರಾಜ್ಯದಲ್ಲಿ ಒಂದಡೆ ಬರಗಾಲ ಮತ್ತೊಂದಡೆ ಲೋಕಸಭೆ ಚುನಾವಣೆ. ಎರಡೂ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೃಷಿ ಸಚಿವ ಕೃಷ್ಣಭೈರೇಗೌಡ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ಮುಂದಾಗಿದ್ದೇವೆ. ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದೆ. ಕೇಂದ್ರ ಸರ್ಕಾರ ಇನ್ನೂ ಕೂಡ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಹಾಗೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್​ ಭರ್ಜರಿಯಾಗೆ ತಯಾರಿ ನಡೆಸಿದೆ. ಈಗಾಗಲೆ 24 ಲೋಕಸಭಾ ಕ್ಷೇತ್ರಗಳ ಪಟ್ಟಿ ಬಿಡುಗಡೆಯಾಗಿದ್ದು, ಇನ್ನು ಎರಡು ಬಾಕಿ ಉಳಿಸಿಕೊಂಡಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.23) ತುರ್ತು ಸುದ್ದಿಗೋಷ್ಠಿ ನಡೆಸಿ,  ಬರ ಪರಿಹಾರ ಘೋಷಿಸದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಸಿದ್ದಾರಾಮಯ್ಯ ಹೇಳಿದರು.

Published on: Mar 23, 2024 03:33 PM