Narendra Modi: ಸರ್ಕಾರ ರಚಿಸಲು ಸಜ್ಜಾದ ಮೋದಿಗೆ ಬಿಜೆಪಿ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

Narendra Modi: ಸರ್ಕಾರ ರಚಿಸಲು ಸಜ್ಜಾದ ಮೋದಿಗೆ ಬಿಜೆಪಿ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

ಸುಷ್ಮಾ ಚಕ್ರೆ
|

Updated on: Jun 04, 2024 | 10:53 PM

ಲೋಕಸಭಾ ಚುನಾವಣೆಯಲ್ಲಿ 292 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಎನ್​ಡಿಎ 3ನೇ ಬಾರಿ ಸರ್ಕಾರ ರಚಿಸಲು ಸಜ್ಜಾಗಿದೆ. ಇಂದು ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಬಂದ ನರೇಂದ್ರ ಮೋದಿಯವರನ್ನು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಭಾರತದಲ್ಲಿ 7 ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ (Lok Sabha Elections Result 2024) ಪ್ರಕಟವಾಗಿದೆ. ಈ ಬಾರಿ ಯಾವ ಪಕ್ಷಕ್ಕೂ ಮತದಾರ ಸ್ಪಷ್ಟ ಬಹುಮತ ನೀಡಿಲ್ಲ. ಆದರೆ, ಕಾಂಗ್ರೆಸ್ ನೇತೃತ್ವದ ಇಂಡಿಯ (INDIA) ಬಣಕ್ಕಿಂತಲೂ ಬಿಜೆಪಿ ನೇತೃತ್ವದ ಎನ್​ಡಿಎ (NDA) ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲು ಸಜ್ಜಾಗಿದೆ. ಈ ಮೂಲಕ ನರೇಂದ್ರ ಮೋದಿಯವರು (Narendra Modi) ಸತತ 3ನೇ ಅವಧಿಗೆ ಪ್ರಧಾನ ಮಂತ್ರಿಯಾಗುವ ಸಿದ್ಧತೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಫಲಿತಾಂಶ ಪ್ರಕಟವಾದ ನಂತರ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲು ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಅಮಿತ್ ಶಾ (Amit Shah) ಅವರನ್ನು ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ