AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ, ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು

Lok Sabha Elections 2024: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ, ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು

ಅಕ್ಷಯ್​ ಪಲ್ಲಮಜಲು​​
|

Updated on:Apr 19, 2024 | 10:35 AM

Share

West Bengal: ಪಶ್ಚಿಮ ಬಂಗಾಳದಲ್ಲಿ ಬೆಳಿಗ್ಗೆಯಿಂದ ಶಾಂತಿಯುತವಾಗಿ ಮತದಾನ ನಡೆದಿದೆ. ಆದರೆ ಇದೀಗ ಏಕಾಏಕಿ ಯಾರೋ ದುಷ್ಕರ್ಮಿಗಳು ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೂಚ್‌ಬೆಹಾರ್‌ನ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಮತದಾನ ಮಾಡಲು ಅಡ್ಡಿಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಪಶ್ಚಿಮ ಬಂಗಾಳ, ಏ.19: ಇಂದು (ಏ.19) ದೇಶದಲ್ಲಿ ಲೋಕಸಭೆ ಚುನಾವಣೆಯ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಈಗಾಗಲೇ ಜನ ಮತಗಟ್ಟೆಯತ್ತ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಇದರ ನಡುವೆ ಪಶ್ಚಿಮ ಬಂಗಾಳದಲ್ಲಿ (West Bengal) ಅಹಿತರ ಘಟನೆಯೊಂದು ನಡೆದಿದೆ. ಕೂಚ್‌ಬೆಹಾರ್‌ನ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಮತದಾನ ಮಾಡಲು ಅಡ್ಡಿ ಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್, ಅಲಿಪುರ್ದವಾರ್ಸ್ ಮತ್ತು ಜಲ್ಪೈಗುರಿ ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆಯಿಂದ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದರು. ಆದರೆ ಇದೀಗ ಕೂಚ್‌ಬೆಹಾರ್‌ ಕ್ಷೇತ್ರದ ಈ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಇನ್ನು ಕೂಚ್ ಬೆಹಾರ್, ಅಲಿಪುರ್ದವಾರ್ಸ್ ಮತ್ತು ಜಲ್ಪೈಗುರಿ ಕ್ಷೇತ್ರದಲ್ಲಿ ಕೇಂದ್ರ ಪಡೆಗಳ ಜೊತೆಗೆ ಒಟ್ಟು 2,454 ರಾಜ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅದರೂ ಇಂತಹ ಘಟನೆ ನಡೆದಿದೆ. ಈ ವಿಡಿಯೋವೊಂದು ವೈರಲ್​​ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 19, 2024 10:30 AM