Amith Shah Road Show in Bengaluru Live: ಬೆಂಗಳೂರಿನಲ್ಲಿ ಅಮಿತ್ ಶಾ ರೋಡ್​ಶೋ: ತೇಜಸ್ವಿ ಸೂರ್ಯ ಪರ ಪ್ರಚಾರ

Updated on: Apr 23, 2024 | 9:50 PM

ಪ್ರಧಾನಿ ಮೋದಿ ಬಂದು ಹೋದ ಬೆನ್ನಲ್ಲೇ, ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಭರವಸೆ ತಂದುಕೊಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತ ಯಾಚಿಸಿದ್ದಾರೆ. ಬರೋಬ್ಬರಿ ಒಂದೂವರೆ ಕಿಲೋ ಮೀಟರ್ ಉದ್ದಕ್ಕೂ ರೋಡ್ ಶೋ ಮಾಡಿ ನಗರ ಮತದಾರರ ಗಮನ ಸೆಳೆದಿದ್ದಾರೆ. ರೋಡ್​ಶೋ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಏಪ್ರಿಲ್​ 23: ಲೋಕಸಭಾ ಚುನಾವಣಾ (Lok Sabha Elections) ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆಬೀಳಲಿದೆ. ಹೀಗಾಗಿ ಅತಿರಥ ಮಹಾರಥರು ಇವತ್ತು ಕದನ ಕಣದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಚಿತ್ರದುರ್ಗ ಮತ್ತು ಬೆಂಗಳೂರಿನ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಅಬ್ಬರಿಸಿದರೆ, ಇತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ಮೋದಿ ಬಂದು ಹೋದ ಬೆನ್ನಲ್ಲೇ, ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಭರವಸೆ ತಂದುಕೊಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತ ಯಾಚಿಸಿದ್ದಾರೆ. ಬರೋಬ್ಬರಿ ಒಂದೂವರೆ ಕಿಲೋ ಮೀಟರ್ ಉದ್ದಕ್ಕೂ ರೋಡ್ ಶೋ ಮಾಡಿ ನಗರ ಮತದಾರರ ಗಮನ ಸೆಳೆದಿದ್ದಾರೆ. ಕೇಸರಿ ಪಡೆಯು ಬಿಜೆಪಿ ಚಾಣಕ್ಯನಿಗೆ ಅದ್ದೂರಿ ಸ್ವಾಗತವನ್ನೇ ಕೋರಿದೆ. ರೋಡ್​ಶೋ ನೇರ ಪ್ರಸಾರ ನೋಡಿ.

Published on: Apr 23, 2024 09:46 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More