ಎಕ್ಸಿಟ್ ಪೋಲ್ ಮೇಲೆ ನಂಬಿಕೆಯಿಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್ 2 ಅಂಕಿ ದಾಟುತ್ತೆ: ಡಿಕೆ ಶಿವಕುಮಾರ್​

Edited By:

Updated on: Jun 01, 2024 | 8:34 PM

ಲೋಕಸಭೆಗೆ ನಡೆದ ಚುನಾವಣೆಯ ಏಳು ಹಂತಗಳ ಮತದಾನ ಕೊನೆಗೊಂಡಿದ್ದು, ಸದ್ಯ ವಿವಿಧ ಸಂಸ್ಥೆಗಳು ನಡೆಸಿರುವ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದೆ. ಈ ಕುರಿತಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​, ಯಾವುದೇ ಎಕ್ಸಿಟ್ ಪೋಲ್ ಮೇಲೆ ನಂಬಿಕೆಯಿಲ್ಲ. ಈ ಚುನಾವಣಾ ಸಮೀಕ್ಷೆ ಬಗ್ಗೆ ನನಗೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 2 ಅಂಕಿ ದಾಟುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಜೂನ್​ 01: ಲೋಕಸಭೆಗೆ ನಡೆದ ಚುನಾವಣೆಯ ಏಳು ಹಂತಗಳ ಮತದಾನ ಇಂದು ಕೊನೆಗೊಂಡಿದೆ. 8 ರಾಜ್ಯ, ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಇದೇ ತಿಂಗಳ ನಾಲ್ಕನೇ ತಾರೀಖು ಲೋಕಸಭಾ ಚುನಾವಣಾ (Lok Sabha Elections) ಫಲಿತಾಂಶ ಪ್ರಕಟವಾಗಲಿದೆ. ಆದರೆ, ಅದಕ್ಕೂ ಮೊದಲೇ ಸದ್ಯ ವಿವಿಧ ಸಂಸ್ಥೆಗಳು ನಡೆಸಿರುವ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದೆ. ಈ ಕುರಿತಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar)​​, ಯಾವುದೇ ಎಕ್ಸಿಟ್ ಪೋಲ್ ಮೇಲೆ ನಂಬಿಕೆಯಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಹೇಳಿದಂತೆ ಇವತ್ತು ಹೇಳುತ್ತೇನೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 2 ಅಂಕಿ ದಾಟುತ್ತದೆ. ಈ ಚುನಾವಣಾ ಸಮೀಕ್ಷೆ ಬಗ್ಗೆ ನನಗೆ ವಿಶ್ವಾಸವಿಲ್ಲ. ಕೆಲವರ ಅಭಿಪ್ರಾಯ ಮಾತ್ರ ಸಂಗ್ರಹಿಸಿರುತ್ತಾರೆ ಅಷ್ಟೇ. ಬಹಳ ಆಳಕ್ಕೆ  ಹೋಗಲ್ಲ ಅವರು. ಪಾರ್ಲಿಮೆಂಟ್​ನಲ್ಲೂ ಅಷ್ಟೇ ಸುಮ್ಮನೆ ಏನೋ ಸ್ಯಾಂಪಲ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More