ಮದುವೆ ಮನೆಯಲ್ಲಿಯೂ ಮತದಾನ ಜಾಗೃತಿ! ಇಲ್ಲಿದೆ ವಿಡಿಯೋ
ಲೋಕಸಭೆ ಚುನಾವಣೆಯಲ್ಲಿ ಮತದಾನ ಹೆಚ್ಚಿಸಲು ಜಾಗೃತಿ ಮೂಡಿಸುವ ಸಲುವಾಗಿ ಚುನಾವಣಾ ಆಯೋಗ ಅನೇಕ ಕ್ರಮಗಳನ್ನು ಕೈಗೊಂಡಿದೆ. ಈ ಮಧ್ಯೆ, ದಾವಣಗೆರೆಯ ಮದುವೆ ಮನೆಯೊಂದರಲ್ಲಿ ವಿಶೇಷವಾಗಿ ಮತದಾನ ಜಾಗೃತಿ ಮೂಡಿಸಿ ವಧು ವರರು ಗಮನ ಸೆಳೆದರು. ಮೇ 7ರಂದು ಮತದಾನ ಮಾಡುವಂತೆ ಆಗಮಿಸಿದ ಬಂಧುಗಳಲ್ಲಿ ಮನವಿ ಮಾಡಿದರು.
ದಾವಣಗೆರೆ, ಏಪ್ರಿಲ್ 16: ಲೋಕಸಭೆ ಚುನಾವಣೆಗೆ (Lok Sabha Elections) ದಿನಗಣನೆ ಆರಂಭವಾಗಿದೆ. ಕರ್ನಾಟಕದಲ್ಲಿ (Karnataka) ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ. ಮೇ 7ರಂದು ಉಳಿದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಮಧ್ಯೆ, ರಾಜ್ಯದಾದ್ಯಂತ ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಮತದಾನ ಪ್ರಮಾಣ ಹೆಚ್ಚಿಸಲು, ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಆಯೋಗವೂ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ, ದಾವಣಗೆರೆ ನಗರದ ಎವಿಕೆ ಕಾಲೇಜು ರಸ್ತೆಯ ಅಕ್ಕ ಮಹಾದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಯೊಂದರಲ್ಲಿಯೂ (Marriage) ಮತದಾನ ಜಾಗೃತಿ ಮೂಡಿಸಲಾಯಿತು.
ದಾವಣಗೆರೆ ನಗರದ ಪಿಜೆ ಬಡಾವಣೆ ನಿವಾಸಿ ಮಂಗಳಾ – ಚಂದ್ರಶೇಖರ ಪುತ್ರ ರಾಮಕುಮಾರ ಹಾಗೂ ಪ್ರೇಮಾ – ನಿಂಗಪ್ಪ ಕರಿಗಾರ ದಂಪತಿಗಳ ಪುತ್ರಿ ತನುಜಾ ಮದುವೆಯಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು. ಮದುವೆಗೆ ಬಂದ ಎಲ್ಲ ಸಂಬಂಧಿಕರಿಗೆ ವಧು ವರರು ಮತದಾನ ಮಾಡುವಂತೆ ಮನವಿ ಮಾಡಿದರು. ಮೇ 7 ರಂದು ತಪ್ಪದೇ (ಉತ್ತರ ಕರ್ನಾಟಕ ಭಾಗದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿದೆ) ಮತದಾನ ಮಾಡಿ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆ: ಏಪ್ರಿಲ್ 25, 26 ರಂದು ಚಿಕ್ಕಮಗಳೂರಿನ ಹೋಂ ಸ್ಟೇ, ರೇಸಾರ್ಟ್ಗಳಲ್ಲಿ ಸಿಗಲ್ಲ ಬುಕಿಂಗ್
ಲೋಕಸಭೆ ಚುನಾವಣೆ ಏಪ್ರಿಲ್ 19ರಂದು ಆರಂಭಗೊಂಡು 7 ಹಂತಗಳಲ್ಲಿ ನಡೆಯಲಿದ್ದು, ಜೂನ್ನಲ್ಲಿ ಕೊನೆಗೊಳ್ಳಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಚುಣಾವಣೆ ನಡೆಯಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
