ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!

Edited By:

Updated on: Jan 30, 2026 | 12:12 PM

ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಇದರಲ್ಲಿ 1 ಲಕ್ಷ ರೂಪಾಯಿ ಈಗಾಗಲೇ ಪಡೆದುಕೊಂಡಿದ್ದ ಇನ್ಸ್‌ಪೆಕ್ಟರ್, ಉಳಿದ 4 ಲಕ್ಷ ರೂಪಾಯಿ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದಾರೆ. ಧನರಾಜ್ ಎಂಬುವವರು ನೀಡಿದ ದೂರಿನನ್ವಯ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ಸ್‌ಪೆಕ್ಟರ್ ಗೋವಿಂದರಾಜು ವಿರುದ್ಧ ತನಿಖೆ ಮುಂದುವರಿದಿದೆ.

ಬೆಂಗಳೂರು, ಜನವರಿ 30: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಇದರಲ್ಲಿ 1 ಲಕ್ಷ ರೂಪಾಯಿ ಈಗಾಗಲೇ ಪಡೆದುಕೊಂಡಿದ್ದ ಇನ್ಸ್‌ಪೆಕ್ಟರ್, ಉಳಿದ 4 ಲಕ್ಷ ರೂಪಾಯಿ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದಾರೆ. ಧನರಾಜ್ ಎಂಬುವವರು ನೀಡಿದ ದೂರಿನನ್ವಯ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ಸ್‌ಪೆಕ್ಟರ್ ಗೋವಿಂದರಾಜು ವಿರುದ್ಧ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Jan 30, 2026 12:06 PM