ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!

Edited By:

Updated on: Jan 18, 2026 | 2:04 PM

ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಪ್ರಥಮ ದರ್ಜೆ ಸಹಾಯಕರಾದ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶಶಿಕುಮಾರ್, ಪುಟ್ಟ ಕಿಶನ್ ರಾಥೋಡ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದರು. ಶಶಿಕುಮಾರ್ ಅವರು ದಾಖಲೆ ಪತ್ರಗಳನ್ನು ನೀಡಲು 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಹಣ ಪಡೆಯುತ್ತಿದ್ದಾಗಲೇ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಕಲಬುರಗಿ, ಜನವರಿ 18:  ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ (Bribe) ಪ್ರಥಮ ದರ್ಜೆ ಸಹಾಯಕರಾದ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶಶಿಕುಮಾರ್, ಪುಟ್ಟ ಕಿಶನ್ ರಾಥೋಡ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದರು. ಶಶಿಕುಮಾರ್ ಅವರು ದಾಖಲೆ ಪತ್ರಗಳನ್ನು ನೀಡಲು 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಕಿಶನ್ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಹಣ ಪಡೆಯುತ್ತಿದ್ದಾಗಲೇ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More