AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ್ತೂರಬಾ ಬಾಲಕಿಯರ ವಸತಿ ಶಾಲೆಗೆ ಲೋಕಾಯುಕ್ತ ಇನ್​ಸ್ಪೆಕ್ಟರ್ ಭೇಟಿ, ಪೊರಕೆ ಹಿಡಿದು ಕ್ಲೀನ್ ಮಾಡಿದ ಸಲೀಂ ಅಹ್ಮದ್

ಪಾವಗಡ ತಾಲೂಕಿನಲ್ಲಿರುವ ಕಸ್ತೂರಬಾ ಬಾಲಕಿಯರ ವಸತಿ ಶಾಲೆಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ವಚ್ಛೆತೆ ಇಲ್ಲಿದಿರುವುದನ್ನು ಕಂಡು ಸಿಬ್ಬಂದಿ ಮೇಲೆ ಗರಂ ಆಗಿದರು.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Jul 07, 2023 | 8:58 PM

Share

ತುಮಕೂರು: ಪಾವಗಡ ತಾಲೂಕು ಆಸ್ಪತ್ರೆ ಪಕ್ಕದಲ್ಲಿರುವ ಕಸ್ತೂರಬಾ ಬಾಲಕಿಯರ ವಸತಿ ಶಾಲೆಗೆ (Kasturba Girls’ Residential School) ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಲೀಂ ಅಹ್ಮದ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿ ಸ್ವಚ್ಛತೆಯೇ ಇಲ್ಲದ್ದನ್ನು ನೋಡಿ ಸಿಟ್ಟಾದ ಲೋಕಾ ಇನ್ಸ್‌ಪೆಕ್ಟರ್‌, ಸ್ವತಃ ಪೊರಕೆ ಹಿಡಿದು ಕಸ ಗುಡಿಸಿದರು. ಅಲ್ಲದೆ, ಟಿವಿ, ಸಿಸಿಟಿವಿ ಮೇಲೆ ಕೂತಿದ್ದ ಧೂಳನ್ನು ಬಟ್ಟೆಯಿಂದ ಒರೆಸಿ ಶುಚಿಗೊಳಿಸಿದರು. ಉತ್ತಮ ಶೌಚಾಲಯ, ಮಲಗಲು ಸರಿಯಾದ ವ್ಯವಸ್ಥೆಯಿಲ್ಲದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ತಂದೆ ತಾಯಿ ಇಲ್ಲದ ಹಾಗೂ ವಲಸೆ ಹೋದಂತವರ ಸುಮಾರು 250 ಹೆಣ್ಣುಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವ ವಸತಿ ಶಾಲೆ ಇದಾಗಿದೆ. ಇಂದು ಬೆಳಿಗ್ಗೆ ಸಿಬ್ಬಂದಿ ಜೊತೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ