ಕಟ್ಟಡ ಕುಸಿತ ಸ್ಥಳದಲ್ಲೇ ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಬೆಂಗಳೂರಿನ ಬಾಬುಸಾಬ್‌ಪಾಳ್ಯದಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಸದ್ಯ 8 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿ ಅಮಾನತು ಮಾಡಲಾಗಿದೆ. ಇದೀಗ ಘಟನೆ ನಡೆದ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಭೇಟಿ ನೀಡಿ ಬಿಬಿಎಂಪಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 23: ನಗರದ ಬಾಬುಸಾಬ್‌ಪಾಳ್ಯದಲ್ಲಿ ಕಟ್ಟಡ ಕುಸಿದ ಘಟನಾ ಸ್ಥಳಕ್ಕೆ ಇಂದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲೇ ಲೋಕಾಯುಕ್ತ ನ್ಯಾಯಮೂರ್ತಿ B.S.ಪಾಟೀಲ್ ಬಿಬಿಎಂಪಿ (BBMP) ವಲಯ ಆಯುಕ್ತ ರಮೇಶ್ ಹಾಗೂ ಎಇ ರಮೇಶ್‌ಗೆ ತರಾಟೆ ತೆಗೆದುಕೊಂಡಿದ್ದಾರೆ. ಬಿ ಖಾತಾ ಸೈಟ್‌ನಲ್ಲಿ ಕಟ್ಟಡ ನಿರ್ಮಿಸುತ್ತಿದ್ದರೂ ಏಕೆ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನಲ್ಲಿ ಇನ್ನೂ ಈ ರೀತಿಯ ಕಟ್ಟಡಗಳು ಎಷ್ಟು ನಿರ್ಮಿಸಲಾಗುತ್ತಿದೆ. ನೀವು ಏನು ಕೆಲಸ ಮಾಡುತ್ತೀದ್ದೀರಿ ಎಂದು ಪ್ರಶ್ನಿಸಿದ್ದಾರೆ. ಲೋಕಾಯುಕ್ತ ನ್ಯಾ.B.S.ಪಾಟೀಲ್ ಪ್ರಶ್ನೆಗೆ BBMP ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ.
ವರದಿ: ಪ್ರದೀಪ್ ಕ್ರೈಂ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos