ಹುಮ್ನಾಬಾದ ಪ್ರಾದೇಶಿಕ ಸಾರಿಗೆ ತನಿಖಾ ಕಚೇರಿ ಮೇಲೆ ಲೋಕಾಯುಕ್ತ ದಾಳಿ!
ಪ್ರಾದೇಶಿಕ ಸಾರಿಗೆ ಕಚೇರಿ ಒಂದು ಸಮೃದ್ಧವಾದ ಹುಲ್ಲುಗಾವಲು ಪ್ರದೇಶ, ಎಗ್ಗಿಲ್ಲದೆ ದುಡ್ಡಿನ ಅವ್ಯವಹಾರ ನಡೆಯುವ ಲಂಚದ ಕೇಂದ್ರ! ರಾಜ್ಯದಲ್ಲಿರುವ ಎಲ್ಲ ಪ್ರಾದೇಶಿಕ ಸಾರಿಗೆ ಕಚೇರಿಗಳ ಮೇಲೆ ದಾಳಿ ಲೋಕಾಯುಕ್ತ ದಾಳಿ ನಡೆಸಿದರೆ ಈ ಇಲಾಖೆಯನ್ನೇ ಮುಚ್ಚಬೇಕಾದ ಸ್ಥಿತಿ ನಿರ್ಮಾಣವಾಗಬಹುದು.
ಬೀದರ್: ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಪ್ರಾದೇಶಿಕ ಸಾರಿಗೆ ತನಿಖಾ ಕಚೇರಿಯ ಮೇಲೆ ಇಂದು ಬೆಳಗ್ಗೆ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಅಧಿಕಾರಿಗಳು ದಿಢೀರನೆ ದಾಳಿ ನಡೆಸಿ ಕಡತ ಮತ್ತು ಇತರ ಕಾಗದ ಪತ್ರಗಳ ಪರಿಶೀಲನೆ ನಡೆಸಿದರು. ಇಲ್ಲಿ ಕೆಲಸ ಮಾಡುವ ಅಧಿಕಾರಿಗಳು ವಾಹನ ಸವಾರರಿಂದ ವಿಪರೀತ ಲಂಚ ಪಡೆಯುತ್ತಿದ್ದಾರೆನ್ನುವ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕರ್ನಾಟಕದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ದಾಳಿ