Loading video

ಬಿವೈ ವಿಜಯೇಂದ್ರ ಸಂಬಂಧಿ ಡಾ ಪ್ರಭುಲಿಂಗ ಮಾನ್ಕರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

|

Updated on: Dec 05, 2023 | 11:00 AM

ಮೊದಲು ಕಲಬುರಗಿಯಲ್ಲಿ ಆರ್ ಸಿ ಹೆಚ್ (ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ-ರಿಪ್ರೊಡಕ್ಟಿವ್ ಅಂಡ್ ಚೈಲ್ಡ್ ಹೆಲ್ತ್) ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಡಾ ಪ್ರಭುಲಿಂಗ್ ಮಾನ್ಕರ್ ಈಗ ಯಾದಗಿರಿ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಲಬುರಗಿ ಹೊರವಲಯದಲ್ಲಿ ಅವರೊಂದು ಫಾರ್ಮ್ ಹೌಸ್ ಹೊಂದಿದ್ದಾರೆ.

ಯಾದಗಿರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರ ಬಾಮೈದ ಅಂದರೆ ಪತ್ನಿಯ ಸಹೋದರ ಡಾ ಪ್ರಭುಲಿಂಗ ಮಾನ್ಕರ್ (Dr Prabhuling Mankar) ಲೋಕಾಯುಕ್ತ ರೇಡಾರ್ ನಲ್ಲಿ ಬಂದಿದ್ದು, ಅವರ ಮನೆ ಮತ್ತು ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ ಪ್ರಭುಲಿಂಗ್ ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿಯಾಗಿ (DHO) ಸೇವಾನಿರತರಾಗಿದ್ದಾರೆ. ಟಿವಿ9 ಕನ್ನಡ ವಾಹಿನಿಯ ಯಾದಗಿರಿ ಮತ್ತು ಕಲಬುರಗಿ ಜಿಲ್ಲಾ ವರದಿಗಾರರು ನೀಡಿರುವ ಮಾಹಿತಿ ಪ್ರಕಾರ ಅಧಿಕಾರಿಯ ಕಲಬುರಗಿ ನಗರದ ಕರುಣೇಶ್ವರ ನಗರದಲ್ಲಿರುವ ಮನೆ, ಹೊರವಲಯದ ಫಾರ್ಮ್ ಹೌಸ್ ಮತ್ತು ಯಾದಗಿರಿ ಆರೋಗ್ಯ ಮತ್ತು ಕಲ್ಯಾಣ ಕಚೇರಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಡಾ ಪ್ರಭುಲಿಂಗ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿರುವರೆಂದು ಮಾಹಿತಿ ಲಭ್ಯವಾಗಿದೆ. ಲೋಕಾಯುಕ್ತ ಎಸ್ ಪಿ ಕರ್ನೂಲ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದ್ದು ವಿವರಗಳು ಇನ್ನೂ ಲಭ್ಯವಾಗಿಲ್ಲ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ