ಮಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 21, 2024 | 11:33 AM

ಕೃಷ್ಣವೇಣಿಯವರ ವಾಸವಾಗಿರುವ ಮನೆ ಫ್ರೆಡ್ ರೋಸ್ ಎಂಕ್ಲೇವ್ ಅಪಾರ್ಟ್​​ಮೆಂಟ್ ಕಾಂಪ್ಲೆಕ್ಸ್ ನಲ್ಲಿ ಇದೆ. ನಮ್ಮ ವರದಿಗಾರರು ನೀಡಿರುವ ಮಾಹಿತಿ ಪ್ರಕಾರ ಇವತ್ತು ಬೆಳಗ್ಗೆ ಸುಮಾರು 25 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ದಾವಣಗೆರೆ, ಧಾರವಾಡ ಮತ್ತು ಮಂಡ್ಯ ಜಿಲ್ಲೆಗಳಲ್ಲೂ ದಾಳಿ ನಡೆದಿದೆ.

ಮಂಗಳೂರು: ಈಗಾಗಲೇ ವರದಿಯಾಗಿರುವ ಹಾಗೆ, ರಾಜ್ಯ ಲೋಕಾಯಕ್ತ ಅಧಿಕಾರಿಗಳು ಇಂದು ನಸುಕಿನಲ್ಲೇ ರಾಜ್ಯದ ಹಲವಾರು ಕಡೆ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಸುಮಾರು ಎರಡು ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಟ್ರಾನ್ಸ್​ಫರ್ ಆಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಅಧಿಕಾರಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣವೇಣಿಯವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆದಿದ್ದು ಲೋಕಾಯುಕ್ತ ಅಧಿಕಾರಿಗಳು ಕಾಗದ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನೆಲಮಂಗಲ: ಆನ್​ಲೈನ್​ನಲ್ಲೇ ಲಂಚ, ಉಪ ಲೋಕಾಯಕ್ತ ದಾಳಿ ವೇಳೆ ಬಯಲಾಯ್ತು ಅಕ್ರಮ