Lokayukta Raid: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಬಗೆದಷ್ಟು ಹಣದ ಕಂತೆಗಳು!
ಇತ್ತೀಚಿನ ವರದಿಗಳ ಪ್ರಕಾರ ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್ ಮನೆ ಮತ್ತು ಕಚೇರಿಯಿಂದ ರೂ. 7.62 ಕೋಟಿ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು: ನಿನ್ನೆ (ಗುರುವಾರ) ಸಾಯಂಕಾಲ ತನ್ಮ ತಂದೆ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಪರವಾಗಿ ರೂ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕ ಪ್ರಶಾಂತ್ ಮಾಡಾಳ್ (Prashant Madal) ಅವರ ಮನೆ ಮತ್ತು ಕಚೇರಿಯಲ್ಲಿ ಕಂತೆ ಕಂತೆ ನೋಟುಗಳು ಬರಾಮತ್ತಾಗಿವೆ. ಇತ್ತೀಚಿನ ವರದಿಗಳ ಪ್ರಕಾರ ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್ ಮನೆ ಮತ್ತು ಕಚೇರಿಯಿಂದ ಇದುವರೆಗೆ ರೂ. 7.62 ಕೋಟಿ ವಶಪಡಿಸಿಕೊಂಡಿದ್ದಾರೆ. ಪ್ರಶಾಂತ್, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಒಬ್ಬ ಅಧಿಕಾರಿಯಾಗಿದ್ದು ನಿಯೋಜನೆ ಮೇರೆಗೆ ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಿನ್ನೆ ಸಾಯಂಕಾಲ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ (ಕೆಎಸ್ ಡಿಎಲ್) (KSDL) ಕೆಮಿಕಲ್ ಪೂರೈಸುವ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗುತ್ತಿಗೆಗದಾರರಿಗೆ ಕಾರ್ಯಾದೇಶ ನೀಡಲು ಲಂಚದ ರೂಪದಲ್ಲಿ ರೂ. 40 ಲಕ್ಷ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ