ಹಾಸನ: ಲೋಕಾಯುಕ್ತರು ದಾಳಿ ನಡೆಸಿದ್ರೂ ಬಾಗಿಲು ತೆರೆಯದೇ ಅಧಿಕಾರಿ ಹೈಡ್ರಾಮಾ!

Edited By:

Updated on: Mar 05, 2026 | 9:07 AM

ಹಾಸನ ಮಹಾನಗರಪಾಲಿಕೆ ಎಂಜಿನಿಯರ್ ಸತ್ಯನಾರಾಯಣ ಅವರ ರವೀಂದ್ರ ನಗರದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಅಧಿಕಾರಿಗಳಿಗೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಬಾಗಿಲು ತೆರೆಯಲು ನಿರಾಕರಿಸಲಾಗಿದೆ. ಡಿವೈಎಸ್ಪಿ ಸುರೇಶ್ ಕುಮಾರ್ ನೇತೃತ್ವದ ತಂಡ ಬಾಗಿಲು ತೆರೆಸಲು ಹರಸಾಹಸ ಪಟ್ಟರೂ ಬಾಗಿಲು ತೆರೆದಿಲ್ಲ.

ಹಾಸನ, ಮಾರ್ಚ್​ 5: ಹಾಸನ ಮಹಾನಗರಪಾಲಿಕೆ ಎಂಜಿನಿಯರ್ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಹಾಸನದ ರವೀಂದ್ರ ನಗರದಲ್ಲಿರುವ ಸತ್ಯನಾರಾಯಣ ಅವರ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ಭೇಟಿ ನೀಡಿದೆ. ಬೆಳಗ್ಗೆ 5:30ರ ಸುಮಾರಿಗೆ ಅಧಿಕಾರಿಗಳು ಮನೆಗೆ ಆಗಮಿಸಿದರೂ, ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಬಾಗಿಲು ತೆರೆಯದೆ ಸತಾಯಿಸಲಾಗಿದೆ.

ಅಧಿಕಾರಿಗಳು ಮನೆ ಬೆಲ್ ಮಾಡಿ, ಬಾಗಿಲು ಬಡಿದು, ಪರಿಶೀಲನೆಗಾಗಿ ಬಾಗಿಲು ತೆರೆಯುವಂತೆ ಸೂಚನೆ ನೀಡಿದರೂ, ಮನೆಯೊಳಗಿನಿಂದ ಯಾರೂ ಪ್ರತಿಕ್ರಿಯಿಸಿಲ್ಲ. ಅಧಿಕಾರಿಗಳು ಆಗಮಿಸಿದಾಗ ಮನೆಯಲ್ಲಿ ಲೈಟ್ ಆನ್ ಆಗಿದ್ದು, ನಂತರ ಆಫ್ ಆಗಿದೆ. ಎಸಿ ಕೂಡ ಆನ್ ಆಗಿ ನಂತರ ಆಫ್ ಆಗಿರುವ ಮಾಹಿತಿ ಲಭ್ಯವಾಗಿದೆ. ಸತ್ಯನಾರಾಯಣ ಅವರು ಈ ಹಿಂದೆ ಹಾಸನ ಹೂಡಾದಲ್ಲಿ, ನಂತರ ಮಹಾನಗರಪಾಲಿಕೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More