ಕೃಷಿ ಅಧಿಕಾರಿಯೋ, ಕುಬೇರನೋ! ಲೋಕಾಯುಕ್ತ ದಾಳಿ ವೇಳೆ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

Edited By:

Updated on: Dec 24, 2025 | 10:14 AM

ವಿಜಯಪುರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಳಪ್ಪ ಯರಝರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಆದಾಯಕ್ಕಿಂತ ಹೆಚ್ಚುವರಿಯಾಗಿ 2.50 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಕಂತೆ ಕಂತೆ ಹಣ, ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಧಿಕಾರಿಗಳ ತಂಡ ಸೂಕ್ಷ್ಮವಾಗಿ ಪರಿಶೀಲನೆ ನಡೆಸುತ್ತಿದೆ.

ವಿಜಯಪುರ, ಡಿಸೆಂಬರ್ 24: ವಿಜಯಪುರ ಜಿಲ್ಲೆಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಳಪ್ಪ ಯರಝರಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಆದಾಯಕ್ಕಿಂತ ಹೆಚ್ಚುವರಿಯಾಗಿ ಮಾಡಿಟ್ಟ 2.50 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬಾಗೇವಾಡಿಯ ಕೃಷಿ ಇಲಾಖೆಯ ಈ ಅಧಿಕಾರಿಯ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಲೋಕಾಯುಕ್ತ ತಂಡ ವಶಪಡಿಸಿಕೊಂಡಿದೆ. ದಾಳಿ ವೇಳೆ 29.48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಮತ್ತು ನಗದು ಪತ್ತೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ