ಲೋಕಾಯುಕ್ತ ದಾಳಿ ವೇಳೆ ಎಸಿಎಫ್​​ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ

Edited By:

Updated on: Jun 16, 2026 | 10:00 AM

ಚಿಕ್ಕಮಗಳೂರಿನಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸಿಎಫ್ ಮೋಹನ್ ಅವರ ಮನೆ, ಕಚೇರಿ ಸೇರಿದಂತೆ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೂರುಗಳ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಚಿಕ್ಕಮಗಳೂರು, ಜೂನ್​​ 16: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮೋಹನ್ ಅವರ ನಿವಾಸ, ಕಚೇರಿ ಹಾಗೂ ನಿರ್ಮಾಣ ಹಂತದ ಮನೆ ಸೇರಿದಂತೆ ಐದು ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ಆಸ್ತಿ ದುರ್ಬಳಕೆ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ನಗರದ ಕಲ್ಯಾಣನಗರದಲ್ಲಿರುವ ಎಸಿಎಫ್ ಮೋಹನ್ ಅವರ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಲಕ್ಷಾಂತರ ರೂಪಾಯಿ ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿವೆ. ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಅಧಿಕಾರಿಯ ಆಸ್ತಿಪಾಸ್ತಿಗಳ ಕುರಿತು ಕೂಲಂಕಷ ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Jun 16, 2026 09:59 AM
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More