ಅಕ್ರಮ ಆಸ್ತಿ ಗಳಿಕೆ ಆರೋಪ: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

Updated on: Oct 14, 2025 | 11:22 AM

ಕರ್ನಾಟಕದಾದ್ಯಂತ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಮಾಜಿ ನಿರ್ದೇಶಕಿ ಸುಮಂಗಲಿ, ವೈದ್ಯಾಧಿಕಾರಿ ಮಂಜುನಾಥ್ ಮತ್ತು ವಿಶೇಷ ಭೂಸ್ವಾಧೀನ ಅಧಿಕಾರಿ ಗಂಗಾ ಮರಿಗೌಡ ಸೇರಿದಂತೆ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ, ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು, ಅಕ್ಟೋಬರ್ 14: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಒಟ್ಟು 12 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿರುವ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಮಾಜಿ ನಿರ್ದೇಶಕಿ ಸುಮಂಗಲಿ ಅವರ ನಿವಾಸದ ಮೇಲೆ 20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಂಗಲಿ ಅವರು ಸದ್ಯ ಅಮಾನತಿನಲ್ಲಿದ್ದರೂ, ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಅವರ ಮೇಲಿದೆ. ಇದೇ ರೀತಿ, ಮಲ್ಲಸಂದ್ರ ಏರಿ ಆಸ್ಪತ್ರೆಯ ವೈದ್ಯಾಧಿಕಾರಿ ಮಂಜುನಾಥ್ ಅವರ ಅನ್ನಪೂರ್ಣೇಶ್ವರಿ ನಗರದ ಮನೆ ಮೇಲೂ ಸುಮಾರು 10ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿಶೇಷ ಭೂಸ್ವಾಧೀನ ಅಧಿಕಾರಿ ಹಾಗೂ ಸರ್ವೇಯರ್ ಗಂಗಾ ಮರಿಗೌಡ ಅವರ ನಿವಾಸದ ಮೇಲೂ ದಾಳಿ ನಡೆದಿದ್ದು, ಶೋಧ ಕಾರ್ಯ ಪ್ರಗತಿಯಲ್ಲಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದರ ಬಗ್ಗೆ ದೂರುಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More