AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್: ಕೈ ಸಾಲದು ಎಂದು ಮೆಷಿನ್ ತಂದ ಅಧಿಕಾರಿಗಳು

ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್: ಕೈ ಸಾಲದು ಎಂದು ಮೆಷಿನ್ ತಂದ ಅಧಿಕಾರಿಗಳು

ಅಕ್ಷಯ್​ ಪಲ್ಲಮಜಲು​​
|

Updated on: Feb 13, 2026 | 7:50 PM

Share

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಎಂಜಿನಿಯರ್ ಎಚ್.ಎಂ. ಜನಾರ್ದನ್ ಮನೆ ಮತ್ತು ಕಚೇರಿ ಸೇರಿದಂತೆ ಆರು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ₹1.70 ಕೋಟಿ ನಗದು ಪತ್ತೆಯಾಗಿದ್ದು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇರಿದಂತೆ ನಾಲ್ವರ ಮೇಲೆ ನಡೆಸಿದ ಈ ದಾಳಿಯಲ್ಲಿ ಒಟ್ಟು ₹23 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ ಬಯಲಾಗಿದೆ. ಈ ಪ್ರಕರಣ ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಬೆಂಗಳೂರು, ಫೆ.13: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ದನ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಏಕಕಾಲದಲ್ಲಿ ಆರು ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದರು. ಈ ದಾಳಿಯ ವೇಳೆ ಅತ್ಯಂತ ಶಾಕಿಂಗ್ ವಿಚಾರವೊಂದು ಹೊರಬಿದ್ದಿದೆ. ಜನಾರ್ದನ್ ಅವರ ಆಪ್ತ ಸುಜಯ್ ಶೆಟ್ಟಿ ಎಂಬುವವರಿಗೆ ಸೇರಿದ ಪ್ಲಾಟ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದಾಗ, ಬರೋಬ್ಬರಿ 1.70 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಈ ಹಣವು ಎಂಜಿನಿಯರ್ ಜನಾರ್ದನ್ ಅವರಿಗೆ ಸೇರಿದ್ದೇ ಎಂಬ ನಿಟ್ಟಿನಲ್ಲಿ ತನಿಖೆ ತೀವ್ರಗೊಂಡಿತ್ತು. ಜನಾರ್ದನ್ ಅವರಿಗೆ ಸೇರಿದ ಮನೆ, ಕಚೇರಿ ಸೇರಿದಂತೆ ಒಟ್ಟು ಆರು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿದೆ. ಇನ್ನು ಲೋಕೋಪಯೋಗಿ ಇಲಾಖೆ (PWD) ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಇಂಜಿನಿಯರ್‌ಗಳು ಸೇರಿದಂತೆ ನಾಲ್ವರು ಪ್ರಮುಖ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More