ಭ್ರಷ್ಟ ಸರ್ಕಾರೀ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮುಂದುವರಿಸಿದ ಲೋಕಾಯುಕ್ತ, ರೇಡಾರ್ ನಲ್ಲಿ 10 ಅಧಿಕಾರಿಗಳು
ಚಿಕ್ಕಮಗಳೂರು ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಯಾಗಿ ಕೆಲಸ ಮಾಡುವ ನೇತ್ರಾವತಿ, ಮಂಡ್ಯದಲ್ಲಿ ಕಾರ್ಯನಿರ್ವಾಹಕ ಎಂಜಿನೀಯರ್ ಆಗಿರುವ ಹರ್ಷ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೆಲಸ ಮಾಡುವ ಯಜ್ಞೇಂದ್ರ ಮತ್ತು ಇನ್ನೂ ಕೆಲ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟ ಸರ್ಕಾರೀ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ (Lokayukta) ದಾಳಿಗಳು ಹೆಚ್ಚಿರುವುದನ್ನು ಕನ್ನಡಿಗರು ಗಮನಿಸುತ್ತಿದ್ದಾರೆ. ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು (Lokayukta Sleuths) ಬೇರೆ ಬೇರೆ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹತ್ತು ಅಧಿಕಾರಿಗಳ ಮನೆ ಮತ್ತು ಅವರ ಕಚೇರಿಗಳ ಮೇಲೆ ದಾಳಿ ನಡೆಸಿ ಆದಾಯಕ್ಕೆ ಮೀರಿದ (disproportionate assets) ಆಸ್ತಿಪಾಸ್ತಿಗಳ ಪರಿಶೀಲನೆ ನಡೆಸಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ ಮೊದಲಾದ ಕಡೆಗಳಲ್ಲಿರುವ ಸರ್ಕಾರೀ ಅಧಿಕಾರಿಗಳ ಮನೆಗಳನ್ನು ಪರಿಶೀಲಿಸಲಾಗುತ್ತಿದೆ. ಚಿಕ್ಕಮಗಳೂರು ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಯಾಗಿ ಕೆಲಸ ಮಾಡುವ ನೇತ್ರಾವತಿ, ಮಂಡ್ಯದಲ್ಲಿ ಕಾರ್ಯನಿರ್ವಾಹಕ ಎಂಜಿನೀಯರ್ ಆಗಿರುವ ಹರ್ಷ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೆಲಸ ಮಾಡುವ ಯಜ್ಞೇಂದ್ರ ಮತ್ತು ಇನ್ನೂ ಕೆಲ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೇಟೆಸ್ಟ್ ಮಹಿತಿಯ ಪ್ರಕಾರ, ನೇತ್ರಾವತಿ ಅವರ ಮನೆಯಲ್ಲಿ 5 ಲಕ್ಷ ರೂ. ನಗದು, 900 ಗ್ರಾಂ ಚಿನ್ನ ಮತ್ತು ಒಂದು ಕೇಜಿ ಬೆಳ್ಳಿ ಪತ್ತೆಯಾಗಿದೆ. ಎಲ್ಲ ಹತ್ತು ಅಧಿಕಾರಿಗಳ ಮನೆಯಲ್ಲಿ ಕಾಗದ ಪತ್ರಗಳ ಪರಿಶೀಲನೆ ನಡೆಯುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ