Sign In

By signing in or creating an account, you agree with Associated Broadcasting Company's Terms & Conditions and Privacy Policy.

KSDL Corruption Case: ಲೋಕಾಯುಕ್ತ ಅಧಿಕಾರಿಗಳಿಂದ ತಡರಾತ್ರಿವರೆಗೆ ವಿಚಾರಣೆಗೊಳಗಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

KSDL Corruption Case: ಲೋಕಾಯುಕ್ತ ಅಧಿಕಾರಿಗಳಿಂದ ತಡರಾತ್ರಿವರೆಗೆ ವಿಚಾರಣೆಗೊಳಗಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 28, 2023 | 10:22 AM

ಕೆಎಎಸ್ ಅಧಿಕಾರಿಯಾಗಿರುವ ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಮಾಡಾಳ್ ತಂದೆಯ ಪರವಾಗಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಬೀಸಿದ ಜಾಲದಲ್ಲಿ ಸಿಕ್ಕಿಬಿದ್ದಿದ್ದರು.

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆಯಲ್ಲಿ (ಕೆಎಸ್ ಡಿ ಎಲ್) (KSDL) ನಡೆಸಿದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು (Madal Virupakshappa) ಲೋಕಾಯುಕ್ತ ಅಧಿಕಾರಿಗಳು (Lokayukta sleuths) ಸೋಮವಾರ ಬಂಧಿಸಿ ತಡರಾತ್ರಿಯವರೆಗೆ ವಿಚಾರಣೆ ನಡೆಸಿದರು. ವಿರೂಪಾಕ್ಷಪ್ಪ ಪಡೆದುಕೊಂಡಿದ್ದ ನಿರೀಕ್ಷಣಾ ಜಾಮೀನನ್ನು ರಾಜ್ಯ ಉಚ್ಚ ನ್ಯಾಯಾಲಯ ಸೋಮವಾರ ರದ್ದುಗೊಳಿಸಿದ ನಂತರ ತುಮಕೂರಿನ ಕ್ಯಾತ್ಸಂದ್ರದಲ್ಲಿ ಅವರನ್ನು ಬಂಧಿಸಲಾಗಿತ್ತು. ಕೆಎಎಸ್ ಅಧಿಕಾರಿಯಾಗಿರುವ ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಮಾಡಾಳ್ ತಂದೆಯ ಪರವಾಗಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಬೀಸಿದ ಜಾಲದಲ್ಲಿ ಸಿಕ್ಕಿಬಿದ್ದಿದ್ದರು. ಲೋಕಾಯುಕ್ತ ಪೊಲೀಸರು ವಿರೂಪಾಕ್ಷಪ್ಪನವರನ್ನು ಇಂದು ಕೋರ್ಟ್ ಮುಂದೆ ಹಾಜರುಪಡಿಸಿ ಕಸ್ಟಡಿ ಕೇಳುವ ನಿರೀಕ್ಷೆಯಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ