ಮದ್ಯದಂಗಡಿ ವಿರುದ್ಧ ದೂರು ದಾಖಲಿಸದಿರಲು ರೂ. 1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಅಬ್ಕಾರಿ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಅರುಣ್​ ಕುಮಾರ್​ ಬೆಳ್ಳಿ

Updated on: Feb 02, 2023 | 6:21 PM

ಕಳೆದ ರಾತ್ರಿ ಬಸವರಾಜ ಮುಂಗಡ ರೂಪದಲ್ಲಿ ರೂ. 1 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.

ರಾಯಚೂರು: ನಗರದ ಲೋಕಾಯುಕ್ತ ಅಧಿಕಾರಿಗಳು (Lokayukta sleuths) ಒಬ್ಬ ಲಂಚಕೋರ ಅಬ್ಕಾರಿ ನಿರೀಕ್ಷಕನನ್ನು ಬಲೆಗೆ ಕೆಡವಿದ್ದಾರೆ. ಘಟನೆ ನಡೆದಿರೋದು ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ (Mallata) ಗ್ರಾಮ ಪಂಚಾಯಿತಿಯಲ್ಲಿ. ಈ ಭಾಗದಲ್ಲಿ ಹನುಮಂತ ಹೆಸರಿನ ವ್ಯಕ್ತಿ ನಡೆಸುತ್ತಿದ್ದ ಮದ್ಯದ ಅಂಗಡಿಯೊಂದರ ವಿರುದ್ಧ ಅದ್ಯಾವುದೋ ಕಾರಣಕ್ಕೆ ದೂರು ದಾಖಲಿಸದಿರಲು ಬಸವರಾಜ ಹೆಸರಿನ ಅಬ್ಕಾರಿ ನಿರೀಕ್ಷಕ (excise inspector) ರೂ. 2 ಲಕ್ಷ ಗಳಿಗೆ ಬೇಡಿಕೆಯಿಟ್ಟಿದ್ದನಂತೆ. ಕಳೆದ ರಾತ್ರಿ ಬಸವರಾಜ ಮುಂಗಡ ರೂಪದಲ್ಲಿ ರೂ. 1 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Feb 02, 2023 06:21 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.