AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಕೇಸ್ ತನಿಖಾಧಿಕಾರಿಯಾಗಿ ನೇಮಕಗೊಂಡ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ ತಿಳಿಯಿರಿ

ಸೌಜನ್ಯ ಕೇಸ್ ತನಿಖಾಧಿಕಾರಿಯಾಗಿ ನೇಮಕಗೊಂಡ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ ತಿಳಿಯಿರಿ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 07, 2026 | 5:29 PM

Share

ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಐಪಿಎಸ್ ಶಶಿಕುಮಾರ್ ನೇತೃತ್ವದಲ್ಲಿ ಎಸ್​​ಐಟಿ ತಂಡವನ್ನು ರಚಿಸಿದೆ. ಇದರ ಬೆನ್ನಲ್ಲೇ ಪ್ರಕರಣದ ತನಿಖೆ ಸಂಬಂಧ ಎಸ್​​ಐಟಿ ತಂಡ ಮಂಗಳೂರಿನಲ್ಲಿ ಮೊದಲ ಸಭೆ ಮಾಡಿದ್ದು, ಈ ವೇಳೆ ಸಿಐಡಿ ಎಸ್ಪಿಯಾಗಿದ್ದ ಲೋಕೇಶ್ ಬಿ ಜಗಲ್ಸರ್ ಅವರನ್ನು ಪ್ರಕರಣದ ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಮಂಗಳೂರು, (ಅಕ್ಟೋಬರ್ 07): ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಐಪಿಎಸ್ ಶಶಿಕುಮಾರ್ ನೇತೃತ್ವದಲ್ಲಿ ಎಸ್​​ಐಟಿ ತಂಡವನ್ನು ರಚಿಸಿದೆ. ಇದರ ಬೆನ್ನಲ್ಲೇ ಪ್ರಕರಣದ ತನಿಖೆ ಸಂಬಂಧ ಎಸ್​​ಐಟಿ ತಂಡ ಮಂಗಳೂರಿನಲ್ಲಿ ಮೊದಲ ಸಭೆ ಮಾಡಿದ್ದು, ಈ ವೇಳೆ ಸಿಐಡಿ ಎಸ್ಪಿಯಾಗಿದ್ದ ಲೋಕೇಶ್ ಬಿ ಜಗಲ್ಸರ್ ಅವರನ್ನು ಪ್ರಕರಣದ ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಲೋಕೇಶ್ ಬಿ ಜಗಲ್ಸರ್ ಖಡಕ್ ಪೊಲೀಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಬಾಗಲಕೋಟೆ, ಧಾರವಾಡ ಜಿಲ್ಲೆಯಲ್ಲಿ ಎಸ್ಪಿಯಾಗಿ ಬೆಂಗಳೂರಿನಲ್ಲಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 7.11 ಕೋಟಿ ದರೋಡೆಯಿಂದ ಹೈಪ್ರೊಫೈಲ್ ಸಿಜೆ ರಾಯ್ ಪ್ರಕರಣದವರೆಗೆ ಈ ಹಿಂದೆ ಹೈಪ್ರೊಫೈಲ್ ಕೇಸ್‌ಗಳನ್ನ ಭೇದಿಸಿದ್ದಾರೆ. ಹಾಗಾದ್ರೆ, ಯಾರು ಈ ಲೋಕೇಶ್ ಬಿ ಜಗಲ್ಸರ್ ? ಇವರ ಹಿನ್ನೆಲೆ ಬಗ್ಗೆ ಸ್ವಲ್ಪ ತಿಳಿದುಕೊಳ್ಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 07, 2026 05:22 PM

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More