ಚಾರ್ಮಾಡಿ ಘಾಟಿಯ ನಡುರಸ್ತೆಯಲ್ಲಿ ನಿಂತು ಘೀಳಿಟ್ಟ ಒಂಟಿ ಸಲಗ, ಬೆಚ್ಚಿ ಬಿದ್ದ ಜನ
ಚಾರ್ಮಾಡಿ ಘಾಟಿ(Charmadi Ghat)ಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ನಡುರಸ್ತೆಯಲ್ಲಿ ನಿಂತು ಘೀಳಿಡುತ್ತಿದ್ದ ಆನೆಯನ್ನು ಕಂಡು ಜನರು ಆತಂಕಗೊಂಡಿದ್ದರು. ಮಂಗಳೂರು-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ, ಒಂಟಿ ಸಲಗ ದಾಳಿಯ ಆತಂಕದಲ್ಲೇ ವಾಹನ ಸವಾರರು ಸಂಚಾರ ಮಾಡುತ್ತಿದ್ದಾರೆ. ಕಳೆದ ತಿಂಗಳಿನಿಂದ ಚಾರ್ಮಾಡಿ ಘಾಟಿಯ ಕಾಡಿನಲ್ಲಿ ಸಲಗ ಬೀಡುಬಿಟ್ಟಿದೆ. ಈ ಪ್ರದೇಶದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆ ಹೇಳುವಷ್ಟೇನು ಅಗಲವಾಗಿಲ್ಲ.

ಏಪ್ರಿಲ್ ತಿಂಗಳಲ್ಲೂ ಆನೆ ಕಾಣಿಸಿಕೊಂಡಿತ್ತು
ತಿರುವಿನಲ್ಲಿ ನಿಂತಿದ್ದ ಕಾಡಾನೆ ಕಾಣಿಸದೆ ಬಂದ ಬೈಕ್ ಸವಾರರು ಪವಾಡಸದೃಶರಾಗಿ ಪಾರಾಗಿದ್ದರು. ಚಾರ್ಮಾಡಿ ಘಾಟ್‌ನ ಒಂಬತ್ತನೇ ತಿರುವಿನಲ್ಲಿ ಏಪ್ರಿಲ್ 8ರಂದು ಮಧ್ಯಾಹ್ನದ ಸಮಯದಲ್ಲಿ ಕಾಡಾನೆಯೊಂದು ಸ್ವಚ್ಛಂದವಾಗಿ ವಿಹರಿಸುತ್ತಿದ್ದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಎರಡು ತಿಂಗಳ ಹಿಂದೆ ನಡೆದ ಇದೇ ರೀತಿಯ ಘಟನೆಯನ್ನು ನೆನಪಿಸಿದೆ. ಆಗಲೂ ಸಹ ಕಾಡಾನೆಗಳು ಹಗಲು ಹೊತ್ತಿನಲ್ಲಿ ರಸ್ತೆಗಳನ್ನು ದಾಟುತ್ತಿರುವುದು ನೋಡಿ ವಾಹನ ಸವಾರರು ಭಯಭೀತರಾಗಿದ್ದರು.
ಈ ಘಾಟಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗಡಿಯಲ್ಲಿ ಹೊಂದಿಕೊಂಡಿದ್ದು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುತ್ತದೆ. ಚಾರ್ಮಾಡಿ ಘಟ್ಟಗಳ ಕೆಳಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿಗೆ ಸೇರಿರುವ ಚಾರ್ಮಾಡಿ ಎಂಬ ಗ್ರಾಮವಿದೆ. ಅದರಿಂದಾಗಿ ಈ ಘಟ್ಟಗಳಿಗೆ ಈ ಹೆಸರು ಬಂದಿದೆ.
ಇಲ್ಲಿ ಎತ್ತರವಾದ ಬೆಟ್ಟ-ಗುಡ್ದ, ಆಳವಾದ ಕಣಿವೆ-ಪ್ರಪಾತ, ದಟ್ಟ ಕಾಡು, ಅಸಂಖ್ಯಾತ ಜಲಪಾತಗಳು, ವನ್ಯಮೃಗಗಳು, ಹತ್ತಾರು ಝರಿ-ತೊರೆ, ಶೋಲ ಕಾಡು,ಅಪರೂಪವಾದ ಹುಲ್ಲುಗಾವಲುಗಳನ್ನು ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ