AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಂಗ್ ವೀಕೆಂಡ್ ಎಫೆಕ್ಸ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ಲಾಂಗ್ ವೀಕೆಂಡ್ ಎಫೆಕ್ಸ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ಗಣಪತಿ ಶರ್ಮಾ
|

Updated on:May 01, 2026 | 1:57 PM

Share

ಸತತ ಮೂರು ದಿನಗಳ ರಜೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ನಿವಾಸಿಗಳು ತಂಡೋಪತಂಡವಾಗಿ ಊರುಗಳತ್ತ ಪ್ರಯಾಣ ಬೆಳೆಸುತ್ತಿದ್ದಾರೆ. ಇದರಿಂದ ನೆಲಮಂಗಲ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿವೆ. ವಾಹನ ಸವಾರರು ಸುಡು ಬಿಸಿಲಲ್ಲೂ ಟ್ರಾಫಿಕ್​ನಲ್ಲಿ ನಿಧಾನಗತಿಯಲ್ಲಿ ಸಂಚರಿಸುತ್ತಿರುವ ವಿಡಿಯೋಗಳು ಈಗ ವೈರಲ್ ಆಗುತ್ತಿದೆ.

ನೆಲಮಂಗಲ, ಮೇ 1: ಇಂದಿನಿಂದ (ಮೇ 1) ಸತತ ಮೂರು ದಿನಗಳ ರಜೆ ಇರುವುದರಿಂದ ಬೆಂಗಳೂರಿಗರು ತಮ್ಮ ಊರುಗಳತ್ತ ಮತ್ತು ಪ್ರವಾಸಿ ತಾಣಗಳತ್ತ ತೆರಳುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಹೊರಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಕ್ರವಾರ ಬೆಳಗ್ಗೆ ವಾಹನಗಳ ದಟ್ಟಣೆ ವಿಪರೀತವಾಗಿ ಹೆಚ್ಚಾಗಿದ್ದು, ಪ್ರಯಾಣಿಕರು ಗಂಟೆಗಟ್ಟಲೆ ರಸ್ತೆಯಲ್ಲೇ ಕಳೆಯುವಂತಾಗಿದೆ. ಅದರಲ್ಲೂ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಿಲೋಮೀಟರ್‌ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಅತ್ಯಂತ ನಿಧಾನಗತಿಯಲ್ಲಿ ಚಲಿಸುತ್ತಿವೆ. ನೆಲಮಂಗಲ ಟೋಲ್ ಬಳಿ ವಾಹನಗಳು ಸಾಲುಗಟ್ಟಿರುವ ಚಾಚಿಕೊಂಡಿದ್ದು, ಸಂಚಾರ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿರುವುದು ಕಂಡುಬಂತು.

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 01, 2026 01:55 PM
Follow Us