ಗ್ರೇಟರ್​ಗೆ ಕ್ವಾರ್ಟರ್ ಎನ್ನುವ ವಿಪಕ್ಷ ನಾಯಕ ಅಶೋಕ ಬುದ್ಧಿವಂತರು ಅನ್ಕೊಂಡಿದ್ದೆ: ಲಕ್ಷ್ಮಿ ಹೆಬ್ಬಾಳ್ಕರ್

ಅರುಣ್​ ಕುಮಾರ್​ ಬೆಳ್ಳಿ

Updated on: May 16, 2025 | 4:37 PM

ಯಾವುದೇ ಸಾಧನೆ ಮಾಡದೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಶೆಟ್ಟರ್ ಸಾಹೇಬರು ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಮಂತ್ರಿಮಂಡಲದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದವರು, ಅವರೊಬ್ಬ ಅನುಭವಸ್ಥ ರಾಜಕಾರಣಿ, ಅವರ ಬಗ್ಗೆ ತಾನೇನು ಮಾತಾಡುವುದು ಸಾಧ್ಯ ಎಂದು ವ್ಯಂಗ್ಯವಾಗಿ ಹೇಳಿದರು.

ದಾವಣಗೆರೆ, ಮೇ 16: ವಿರೋಧ ಪಕ್ಷದ ನಾಯಕ ಆರ್ ಅಶೋಕ (Leader of Opposition R Ashoka) ಗ್ರೇಟರ್ ಬೆಂಗಳೂರನ್ನು ಕ್ವಾರ್ಟರ್ ಬೆಂಗಳೂರು ಅಂತ ಹೇಳಿದ್ದು ವ್ಯಾಪಕ ಟೀಕೆಗೆ ಗುರಿಯಾಗುತ್ತಿದೆ. ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗ್ರೇಟರ್ ಎಂಬ ಪದವನ್ನು ಕ್ವಾರ್ಟರ್ ಅಂತ ಹೇಳುವ ಅಶೋಕಣ್ಣ ಅವರ ಬುದ್ಧಿಗೆ ಏನು ಹೇಳೋದು? ಅವರು ಬುದ್ಧಿವಂತರೆಂದು ಭಾವಿಸಿದ್ದೆ, ಅದರೆ ಕಾಮಾಲೆ ರೋಗದಿಂದ ಬಳಳುವವರಿಗೆ ಜಗವೆಲ್ಲ ಹಳದಿಯಾಗಿ ಕಾಣುತ್ತಂತೆ, ಅಶೋಕಣ್ಣನ ಮನಸ್ಥಿತಿಯೂ ಹಾಗಿದೆ ಎಂದು ಹೇಳಿದರು.

ಇದನ್ನೂ ಓದಿ:  ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ದೂರು ದಾಖಲಿಸಿದ್ದೇನೆ, ಅವರನ್ಯಾಕೆ ಬಂಧಿಸಿ ವಿಚಾರಣೆ ನಡೆಸಿಲ್ಲ? ಸಿಟಿ ರವಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.