ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು

Updated on: Dec 16, 2025 | 10:39 PM

ಉಡುಪಿ ಪೊಲೀಸರು 60 ಕಳೆದುಹೋದ ಮೊಬೈಲ್‌ಗಳನ್ನು ಅವುಗಳ ಮಾಲೀಕರಿಗೆ ಮರಳಿ ನೀಡುವ ಮೂಲಕ ಸಾರ್ವಜನಿಕರ ಮೆಚ್ಚುಗೆ ಗಳಿಸಿದ್ದಾರೆ. ₹8.83 ಲಕ್ಷ ಮೌಲ್ಯದ ಈ ಫೋನ್‌ಗಳನ್ನು CAIR ಪೋರ್ಟಲ್ ದೂರಿನ ಆಧಾರದ ಮೇಲೆ ಪತ್ತೆಹಚ್ಚಿ ಹಸ್ತಾಂತರಿಸಲಾಗಿದೆ. ಕಷ್ಟಪಟ್ಟು ಮೊಬೈಲ್ ಖರೀದಿಸಿದ್ದವರಿಗೆ ಇದು ಸಂತಸ ತಂದಿದೆ. ಮೊಬೈಲ್ ಕಳೆದುಕೊಂಡರೆ CAIR ಪೋರ್ಟಲ್‌ನಲ್ಲಿ ದೂರು ದಾಖಲಿಸುವಂತೆ ಡಿವೈಎಸ್‌ಪಿ ಪ್ರಭು ಸಲಹೆ ನೀಡಿದ್ದಾರೆ.

ಉಡುಪಿ, ಡಿ.16: ಒಂದು ಕಡೆ ಪೊಲೀಸರು ದುರಾಸೆಯಿಂದ ಕಳ್ಳತನ, ಮೋಸದ ಕೆಲಸಗಳಿಗೆ ಕೈ ಹಾಕಿದ್ರೆ, ಇನ್ನು ಕೆಲವು ಕಡೆ ಸತ್ಯದ ಹಾದಿಯಲ್ಲಿ ಸಾಗುತ್ತಿದ್ದಾರೆ. ಹೌದು ಇದಕ್ಕೆ ಉದಾಹರಣೆ ಉಡುಪಿಯ ಪೊಲೀಸರು. ಇಲ್ಲಿನ ಅಧಿಕಾರಿಗಳು ಜನರ ಮುಖದಲ್ಲಿ ಮಂದಹಾಸ ತಂದಿದ್ದಾರೆ. ಉಡುಪಿಯಲ್ಲಿ ನಡೆದ ಸರಣಿ ಮೊಬೈಲ್​ ಕಳ್ಳತದಿಂದ ಉಡುಪಿ ಜನರು ಬೇಸತ್ತು. ಸಿಎಐಆರ್ ಪೋರ್ಟಲ್ ನಲ್ಲಿ ದೂರು ನೀಡಿದರು. ಇದೀಗ ಪೊಲೀಸರು ನಡೆಸಿದ ಕಾರ್ಯಚರಣೆಯಿಂದ ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದಿದ್ದಾರೆ. ನಗರ ಠಾಣೆ ಪೊಲೀಸರಿಂದ 60 ಮಂದಿಗೆ ಮೊಬೈಲ್ ಹಸ್ತಾಂತರ ಮಾಡಿದ್ದಾರೆ. 8 ಲಕ್ಷದ 83 ಸಾವಿರದ 400 ರೂ. ಮೌಲ್ಯದ 60 ಮೊಬೈಲ್​​ನು ಕಳೆದುಕೊಂಡವರಿಗೆ ವಾಪಸ್​​​ ನೀಡಿದ್ದಾರೆ. ಮೊಬೈಲ್ ಕಳೆದುಕೊಂಡಿದ್ದವರಿಂದ ಸಿಎಐಆರ್ ಪೋರ್ಟಲ್​​ನಲ್ಲಿ ದೂರು ದಾಖಲಾಗಿತ್ತು. ಸಿಎಐಆರ್ ನಲ್ಲಿ ದಾಖಲಾಗಿದ್ದ ದೂರು ನಗರ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಲಾಗಿತ್ತು. ಈ ದೂರಿನ ಆಧಾರ ಮೇಲೆ ಕಾರ್ಯಚರಣೆ ನಡೆಸಿದ ಪೊಲೀಸರು ಮೊಬೈಲ್​​​​​ ಹುಡುಕಿಕೊಟ್ಟಿದ್ದಾರೆ. ಕಷ್ಟಪಟ್ಟು ಇಎಮ್ ಐ ಮೂಲಕ ಮೊಬೈಲ್ ಖರೀದಿಸಿದ್ದವರಿಗೆ ಇದೀಗ ಈ ವಿಚಾರ ಸಂತಸ ತಂದಿದೆ. ಇದೀಗ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಸಾರ್ವಜನಿಕರಿಗೆ ಡಿವೈಎಸ್ಪಿ ಡಿ.ಟಿ ಪ್ರಭು ಸಲಹೆಯೊಂದನ್ನು ನೀಡಿದ್ದಾರೆ. ಮೊಬೈಲ್ ಕಳೆದುಕೊಂಡರೆ ಗಾಬರಿಯಾಗದೆ ಸಿಎಐಆರ್ ಪೋರ್ಟಲ್ ನಲ್ಲಿ ದೂರು ದಾಖಲಿಸಿ, ಈ ವರ್ಷ ಸಿಎಐಆರ್ ಪೋರ್ಟಲ್ ನಲ್ಲಿ ಮೊಬೈಲ್ ಕಳವು ದೂರು ಹೆಚ್ಚಾಗಿದೆ ಎಂದು ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 16, 2025 10:37 PM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More