ಇದ್ದಕ್ಕಿದ್ದಂತೆ ಕರೆಂಟ್ ಕಟ್, ಭಾರೀ ಶಬ್ದ; ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ

Updated on: May 08, 2025 | 9:15 PM

ಜಮ್ಮುವಿನಲ್ಲಿ ಹಲವಾರು ಬಾರಿ ಜೋರಾದ ಸ್ಫೋಟಗಳು ಕೇಳಿಬಂದಿವೆ. ಇದರಿಂದ ನಿವಾಸಿಗಳಲ್ಲಿ ಭೀತಿ ಎದುರಾಗಿದೆ. ಜಮ್ಮುವಿನಲ್ಲಿ ಸಂಪೂರ್ಣ ವಿದ್ಯುತ್ ಕಡಿತವಾಗಿದೆ. ವಿಮಾನ ನಿಲ್ದಾಣದ ಬಳಿಯೂ ಜೋರಾದ ಸ್ಫೋಟಗಳು ಕೇಳಿಬಂದಿವೆ. ಜಮ್ಮುವಿನಲ್ಲಿ ಇದ್ದಕ್ಕಿದ್ದಂತೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಗಿನ 9 ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ದಾಳಿ ನಡೆಸಿದ ಒಂದು ದಿನದ ನಂತರ ಈ ಸ್ಫೋಟ ಸಂಭವಿಸಿದೆ. ಗುರುವಾರ ಸಂಜೆ ಜಮ್ಮುವಿನಲ್ಲಿ ಹಲವಾರು ಬಾರಿ ಜೋರಾದ ಸ್ಫೋಟಗಳು ಕೇಳಿಬಂದಿದ್ದು, ನಿವಾಸಿಗಳಲ್ಲಿ ಭೀತಿ ಮೂಡಿಸಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಗಿನ 9 ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ದಾಳಿ ನಡೆಸಿದ ಒಂದು ದಿನದ ನಂತರ ಈ ಸ್ಫೋಟ ಸಂಭವಿಸಿದೆ.

ಜಮ್ಮು, ಮೇ 8: ಜಮ್ಮು ವಿಮಾನ ನಿಲ್ದಾಣದ ಮೇಲೆ ಭಾರತ ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಇದರಿಂದ ಉಧಂಪುರದಲ್ಲಿ ಜೋರಾಗಿ ಸ್ಫೋಟಗಳ ಸದ್ದು ಕೇಳಿಬಂದಿತು. ಇಂದು ಮುಂಜಾನೆ ಪಾಕಿಸ್ತಾನದ ಒಳಗೆ ನುಗ್ಗಿದ್ದ ಭಾರತೀಯ ಸೇನೆ ಪಾಕಿಸ್ತಾನದ ಕ್ಷಿಪಣಿಗಳನ್ನು ಧ್ವಂಸ ಮಾಡಿತ್ತು. ಇದರಿಂದ ಮತ್ತೆ ರೊಚ್ಚಿಗೆದ್ದಿರುವ ಪಾಕಿಸ್ತಾನ ಮತ್ತೊಮ್ಮೆ ಭಾರತದ ಮೇಲೆ ದಾಳಿ ನಡೆಸಿದೆ ಎನ್ನಲಾಗುತ್ತಿದೆ. ಇಂದು ಸಂಜೆ ಜಮ್ಮುವಿನಲ್ಲಿ ಇದ್ದಕ್ಕಿದ್ದಂತೆ ವಿದ್ಯುತ್ ಕಡಿತವಾಗಿ ಸಂಪೂರ್ಣ ಕತ್ತಲು ಆವರಿಸಿದೆ. ಇದೇ ವೇಳೆ ಭಾರೀ ಶಬ್ದವೂ ಕೇಳಿದೆ. ತಕ್ಷಣ ಸೈರನ್​ಗಳು ಕೂಗಿಕೊಳ್ಳಲಾರಂಭಿಸಿದೆ. ಇದರಿಂದ ಜನರು ಗಾಬರಿಯಾಗಿ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ವೇಳೆ ಕತ್ತಲು ತುಂಬಿದ ಆಕಾಶದಲ್ಲಿ ದೊಡ್ಡ ಬೆಳಕು ಕಾಣಿಸಿಕೊಂಡಿದ್ದು, ಪಾಕಿಸ್ತಾನದಿಂದ ಡ್ರೋನ್ ದಾಳಿ ನಡೆದಿದ್ದು, ಆ ಡ್ರೋನ್​ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಜಮ್ಮು ನಗರದಲ್ಲಿ ಜೋರಾಗಿ ಸ್ಫೋಟಗಳ ಸದ್ದು ಕೇಳಿಬಂದ ನಂತರ ಗುರುವಾರ ಜಮ್ಮುವಿನಲ್ಲಿ ಸಂಪೂರ್ಣ ಬ್ಲಾಕೌಟ್ ಕಂಡುಬಂದಿದೆ. ಪಾಕಿಸ್ತಾನವು ಜಮ್ಮುವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಜಮ್ಮು ವಿಭಾಗದ ಕಿಶ್ತ್ವಾರ್‌ನಲ್ಲಿಯೂ ಸಂಪೂರ್ಣ ಬ್ಲಾಕೌಟ್ ಕಂಡುಬಂದಿದ್ದು, ಜಿಲ್ಲೆಯಾದ್ಯಂತ ಸೈರನ್‌ಗಳು ಕೇಳಿಬಂದವು. ಪಾಕಿಸ್ತಾನದ ಆಳದಲ್ಲಿರುವ ಒಂಬತ್ತು ಭಯೋತ್ಪಾದಕ ತಾಣಗಳನ್ನು ನಾಶಪಡಿಸಿದ ಆಪರೇಷನ್ ಸಿಂಧೂರ್ ಅನ್ನು ಭಾರತ ಯಶಸ್ವಿಯಾಗಿ ನಿರ್ವಹಿಸಿದ ನಂತರ ಈ ಘಟನೆ ನಡೆದಿದೆ. ಪಾಕಿಸ್ತಾನ ನಿನ್ನೆ ಹಲವಾರು ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಅವುಗಳಲ್ಲಿ ಒಂದು ಅಮೃತಸರದಲ್ಲಿರುವ ಮಿಲಿಟರಿ ಸ್ಥಾಪನೆಗಳು. ಆ ಎಲ್ಲಾ ಪ್ರಯತ್ನಗಳನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: May 08, 2025 09:14 PM