ಇದನ್ನು ನಿರೀಕ್ಷಿಸಿರಲಿಲ್ಲ; ‘ಲವ್ ಮಾಕ್ಟೇಲ್ 3’ ಸಿನಿಮಾ ಸೂಪರ್ ಎಂದ ಸೆಲೆಬ್ರಿಟಿಗಳು

Updated on: Mar 18, 2026 | 9:46 AM

‘ಲವ್ ಮಾಕ್ಟೇಲ್ 3’ ಸಿನಿಮಾ ಗುರುವಾರ (ಮಾರ್ಚ್ 19) ರಿಲೀಸ್ ಆಗುತ್ತಿದೆ. ಇಂದು ಸಿನಿಮಾಗೆ ಪೇಡ್ ಪ್ರೀಮಿಯರ್​ಗಳನ್ನು ಇಡಲಾಗಿದೆ. ಅಂದರೆ, ಮಾರ್ಚ್ 18ರಂದು ಸಿನಿಮಾನ ಜನರು ಕಣ್ತುಂಬಿಕೊಳ್ಳಬಹುದು. ‘ಲವ್ ಮಾಕ್ಟೇಲ್ 3’ ಹೀಗಿರುತ್ತೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಅನೇಕರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಲವ್ ಮಾಕ್ಟೇಲ್ 3’ ಸಿನಿಮಾದ ವಿಶೇಷ ಶೋಗಳನ್ನು ತಂಡದವರಿಗಾಗಿ ಆಯೋಜನೆ ಮಾಡಲಾಗಿತ್ತು. ಕೆಲ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದರು. ಇದನ್ನು ನೋಡಿದ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಸಿನಿಮಾ ಹೀಗೆ ಇರುತ್ತದೆ ಎಂದು ನಾನು ಊಹಿಸರಲಿಲ್ಲ’ ಎಂದು ಅನೇಕರು ಹೇಳಿದ್ದಾರೆ. ಮೊದಲ ಭಾಗದಲ್ಲಿ ಕಥಾ ನಾಯಕನ ಪತ್ನಿ ಸಾಯುತ್ತಾಳೆ. ಎರಡನೇ ಭಾಗದಲ್ಲಿ ಆತನ ಜೀವನದಲ್ಲಿ ಒಂದು ಮಗು ಬರುತ್ತದೆ. ಮೂರನೇ ಭಾಗ ಯಾವ ರೀತಿಯಲ್ಲಿ ಇರಬಹುದು ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More