ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮಕ್ಕೆ ನಿರ್ಧಾರ

Updated on: Mar 25, 2026 | 9:07 PM

‘ಲವ್ ಮಾಕ್ಟೇಲ್ 3’ ಸಿನಿಮಾದ ಕಥೆ ಬಗ್ಗೆ ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಅವರು ತಕರಾರು ತೆಗೆದಿದ್ದಾರೆ. ಕೃತಿಚೌರ್ಯ ಆಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ‘ಲವ್ ಮಾಕ್ಟೇಲ್ 3’ ಸಿನಿಮಾದ ನಿರ್ದೇಶಕ, ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾದ ಕಥೆ ಬಗ್ಗೆ ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಅವರು ತಕರಾರು ತೆಗೆದಿದ್ದಾರೆ. ಕೃತಿಚೌರ್ಯ ಆಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ‘ಲವ್ ಮಾಕ್ಟೇಲ್ 3’ ಸಿನಿಮಾದ ನಿರ್ದೇಶಕ, ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಸೆಕೆಂಡ್ ಹಾಫ್ ಕಥೆ ಕದ್ದಿದ್ದಾರೆ ಅಂತ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಬಂದಿದೆ. ಒಬ್ಬ ಫಿಲ್ಮ್ ಮೇಕರ್​ಗೆ ಇದಕ್ಕಿಂತ ಬೇರೆ ಅವಮಾನ ಇಲ್ಲ. ನಮ್ಮ ಮರ್ಯಾದೆ ಹೋಗಿದೆ. ಅದಕ್ಕಾಗಿ ನಾನು ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಮೇಲೆ ಕಾನೂನು ಹೋರಾಟ ಮಾಡುತ್ತೇನೆ. ನಾನು ರಾಜಿ ಆಗಲ್ಲ. ಇಂಥವರಿಗೆ ಈ ರೀತಿಯೇ ಉತ್ತರ ನೀಡಬೇಕು’ ಎಂದು ಡಾರ್ಲಿಂಗ್ ಕೃಷ್ಣ (Darling Krishna) ಅವರು ಗರಂ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More