Tirupati Rains: ವಿಡಿಯೋ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ದೇವಸ್ಥಾನದ ಸುತ್ತಮುತ್ತ ಪ್ರವಾಹ ಪರಿಸ್ಥಿತಿ!

|

Updated on: Oct 14, 2024 | 2:51 PM

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆಯಿಂದಾಗಿ ದೇವಸ್ಥಾನದ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ! ದೇವಸ್ಥಾನದ ಸುತ್ತಮುತ್ತ, ಮೇಡ ರಸ್ತೆಗಳಲ್ಲಿ ಮಳೆ ನೀರು ತುಂಬಿಕೊಂಡಿದೆ. ಇದರಿಂದ ಭಕ್ತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಭಾರೀ ಮಳೆಯಿಂದಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರನ್ನು ಅಧಿಕಾರಿಗಳು ಶೆಡ್‌ಗಳಿಗೆ ಸ್ಥಳಾಂತರಿಸುತ್ತಿದ್ದಾರೆ ಎಂದು ಟಿಟಿಡಿ ಮೂಲಗಳು ತಿಳಿಸಿವೆ.

Heavy Rains In Tirumala hills Watch Video: ನೆರೆಯ ರಾಜ್ಯಗಳಲ್ಲಿ ವಾಯುಭಾರ ಕುಸಿತದ ಪರಿಣಾಮ ಆಂಧ್ರ ಪ್ರದೇಶ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ತಿರುಮಲದ ಆಧ್ಯಾತ್ಮಿಕ ಮಂದಿರದಲ್ಲಿ ಬೆಳಗಿನ ಜಾವದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆಯಿಂದಾಗಿ ದೇವಸ್ಥಾನದ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ! ದೇವಸ್ಥಾನದ ಸುತ್ತಮುತ್ತ, ಮೇಡ ರಸ್ತೆಗಳಲ್ಲಿ ಮಳೆ ನೀರು ತುಂಬಿಕೊಂಡಿದೆ. ಇದರಿಂದ ಭಕ್ತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಭಾರೀ ಮಳೆಯಿಂದಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರನ್ನು ಅಧಿಕಾರಿಗಳು ಶೆಡ್‌ಗಳಿಗೆ ಸ್ಥಳಾಂತರಿಸುತ್ತಿದ್ದಾರೆ ಎಂದು ಟಿಟಿಡಿ ಹೆಚ್ಚುವರಿ ಇಒ ವೆಂಕಯ್ಯ ಚೌಧರಿ ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ಶ್ರೀವಾರಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿವೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಆಂಧ್ರದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ವಾಯು ಒತ್ತಡದಿಂದಾಗಿ ತಿರುಪತಿ, ಚಿತ್ತೂರು, ನೆಲ್ಲೂರು, ಪ್ರಕಾಶಂ, ಅನ್ನಮಯ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳ ಅಧಿಕಾರಿಗಳಿಗೆ ಭಾರೀ ಮಳೆ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಐದು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಅಧಿಕಾರಿಗಳು ರಜೆ ಘೋಷಿಸಿದ್ದಾರೆ. ತುರ್ತು ಅಗತ್ಯದ ಹೊರತು ಜನರು ಹೊರಗೆ ಬರದಂತೆ ಸೂಚಿಸಲಾಗಿದೆ.

ತಮಿಳುನಾಡಿನಲ್ಲೂ ಧಾರಾಕಾರ ಮಳೆಯಾಗುತ್ತಿದೆ. ತಂಜಾವೂರು, ತಿರುನಾರೂರ್ ಮತ್ತು ತಿರುಕೋಟೈ ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಪ್ರವಾಹದ ಅಬ್ಬರದಿಂದಾಗಿ ಹಲವೆಡೆ ವಾಹನ ಸಂಚಾರ ಸ್ಥಗಿತಗೊಂಡಿದೆ. ತೇಣಿ ಜಿಲ್ಲೆಯಲ್ಲಿ ಜಲಪಾತಗಳು ಅಪಾಯದ ಮಟ್ಟ ತಲುಪಿವೆ. ಮುಂದಿನ 48 ಗಂಟೆಗಳಿಂದ ತಮಿಳುನಾಡಿನಾದ್ಯಂತ ಮಳೆಯಾಗಲಿದೆ ಎಂದು ಹವಾಮಾಣ ಇಲಾಖೆ ಐಎಂಡಿ ಎಚ್ಚರಿಕೆ ನೀಡಿದೆ. ಇನ್ನು 15 ಜಿಲ್ಲೆಗಳಲ್ಲಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರ್‌ಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Mon, 14 October 24

Follow us on