Karnataka Weather Forecast: ವಾಯುಭಾರ ಕುಸಿತ, ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?

Updated on: May 15, 2026 | 4:41 PM

Monsoon 2026 : ಬಿಸಿಲಿನ ಬೇಗೆಯ ನಡುವೆಯೇ ಕರ್ನಾಟಕದಲ್ಲಿ ಹಲವೆಡೆ ವರುಣ ತಂಪೆರೆಯುತ್ತಿದ್ದಾನೆ. ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಈ ಮಳೆ ಇನ್ನಷ್ಟು ದಿನ ಮುಂದುವರೆಯಲಿದೆ. ಹೌದು...ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದರಿಂದ 50% ಗಿಂತ ಹೆಚ್ಚಿನ ಪ್ರದೇಶದಲ್ಲಿ ಗುಡುಗು ಮಿಂಚಿನ ಸಮೇತ ಮಳೆಯಾಗುವ ಸಾಧ್ಯತೆಗಳಿವೆ. ಗಂಟೆಗೆ 30ರಿಂದ 40 ಕಿ.ಮೀ ವೇಗ ದಲ್ಲಿ ಗಾಳಿ ಬಿಸಲಿದೆ. ಹೀಗಾಗಿ ಮುಕ್ಕಾಲು ಭಾಗ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರು (ಮೇ 15): ಬಿಸಿಲಿನ ಬೇಗೆಯ ನಡುವೆಯೇ ಕರ್ನಾಟಕದಲ್ಲಿ (Karnataka) ಹಲವೆಡೆ ವರುಣ (Rain) ತಂಪೆರೆಯುತ್ತಿದ್ದಾನೆ. ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಈ ಮಳೆ ಇನ್ನಷ್ಟು ದಿನ ಮುಂದುವರೆಯಲಿದೆ. ಹೌದು…ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದರಿಂದ 50% ಗಿಂತ ಹೆಚ್ಚಿನ ಪ್ರದೇಶದಲ್ಲಿ 3 ದಿನ ಗುಡುಗು ಮಿಂಚಿನ ಸಮೇತ ಮಳೆಯಾಗುವ ಸಾಧ್ಯತೆಗಳಿವೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬಿಸಲಿದೆ. ಹೀಗಾಗಿ ಮುಕ್ಕಾಲು ಭಾಗ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆ?

ಇನ್ನು ಈ ಬಗ್ಗೆ ಹವಾಮಾನ ತಜ್ಞರಾದ CS ಪಾಟೀಲ್ ಅವರು ಟಿವಿ9 ಜತೆ ಮಾತನಾಡಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವ ಭಾರಿ ಮಳೆಯಾಗುವ ಸಾಧ್ಯತೆ ಇದೆ. 50% ಗಿಂತ ಹೆಚ್ಚಿನ ಪ್ರದೇಶದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಗುಡುಗು ಮಿಂಚಿನ ಸಮೇತ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ , ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ , ಚಿಕ್ಕಮಗಳೂರು ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಪಾಟೀಲ್ ಹೇಳಿದ್ದಾರೆ.

ಈ ಬಾರಿಯ ಮಳೆಯ ಮೇಲೆ ಎಲ್ ನಿನೋ ಪರಿಣಾಮ ದೊಡ್ಡಮಟ್ಟದಲ್ಲಿ ಬೀರಲಿದೆ. ಇದರಿಂದ ಈ ವರ್ಷವು ನೈರುತ್ಯ ಮಾನ್ಸೂನ್ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: Karnataka Weather Forecast: ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಮುಂಗಾರು ಪ್ರವೇಶ: ಮೇ 26ಕ್ಕೆ ಕೇರಳಂಗೆ, ಕರ್ನಾಟಕಕ್ಕೆ ಯಾವಾಗ ಎಂಟ್ರಿ?

Published on: May 15, 2026 04:36 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More