AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

ಅಕ್ಷತಾ ವರ್ಕಾಡಿ
|

Updated on:Mar 21, 2026 | 4:51 PM

Share

ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಸಿ. ಲೇಔಟ್‌ನ ಸಾಯಿ ರೆಸಿಡೆನ್ಸಿಯಲ್ಲಿ ಯುಗಾದಿ ದಿನದಂದು ಎರಡು ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಕೃತ್ಯದ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಾಗತಿಕ ಯುದ್ಧದ ಆತಂಕದಿಂದ ಹೆಚ್ಚಿದ ಬೇಡಿಕೆಯೇ ಕಳ್ಳತನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಸಿ. ಲೇಔಟ್‌ನ ಸಾಯಿ ರೆಸಿಡೆನ್ಸಿಯಲ್ಲಿ ಯುಗಾದಿ ದಿನದಂದು ಎರಡು ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಮನೆ ಮುಂದಿನ ಸಿಸಿಟವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಕೃತ್ಯದ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಾಗತಿಕ ಯುದ್ಧದ ಆತಂಕದಿಂದ ಹೆಚ್ಚಿದ ಬೇಡಿಕೆಯೇ ಕಳ್ಳತನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಳ್ಳರ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

 

 

 

Published on: Mar 21, 2026 04:50 PM
Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More