ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

Edited By:

Updated on: Mar 16, 2026 | 10:30 AM

ಎಲ್​ಪಿಜಿ ಗ್ಯಾಸ್ ಕೊರತೆಯ ಸಂಕಷ್ಟ ಒಂದೆಡೆಯಾದರೆ ಇದೇ ಹೊತ್ತಿನಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66 ಎಲ್​ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್, ಸಾವು-ನೋವು ಹಾಗೂ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿವೆ.

ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಆಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More