ವಾಣಿಜ್ಯ ಸಿಲಿಂಡರ್ ಕೊರತೆ: ಹುಬ್ಬಳ್ಳಿಯಲ್ಲಿ ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​

Edited By:

Updated on: Mar 12, 2026 | 12:58 PM

ಹುಬ್ಬಳ್ಳಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಎದುರಾಗಿದ್ದು, ಅನೇಕ ಹೋಟೆಲ್ ಮಾಲೀಕರು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಲು ಕಟ್ಟಿಗೆ ಒಲೆಗಳತ್ತ ಮುಖ ಮಾಡಿದ್ದಾರೆ. ಇದರಿಂದಾಗಿ ಎಂಜಿ ಮಾರ್ಕೆಟ್‌ನಲ್ಲಿ ಕಟ್ಟಿಗೆ ಒಲೆಗಳ ಮಾರಾಟದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಗ್ಯಾಸ್ ಸಿಗದೆ ಅಥವಾ ಬೆಲೆ ಏರಿಕೆಯಿಂದಾಗಿ ಬಾಗಿಲು ಮುಚ್ಚುವ ಬದಲು ಹೋಟೆಲ್‌ಗಳು ಈ ಸಾಂಪ್ರದಾಯಿಕ ವಿಧಾನಕ್ಕೆ ಮರಳುತ್ತಿವೆ.

ಹುಬ್ಬಳ್ಳಿ, ಮಾರ್ಚ್​​ 12: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವದಿಂದಾಗಿ ಹುಬ್ಬಳ್ಳಿಯ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಸಿಲಿಂಡರ್‌ಗಳು ಸಿಗದೆ ಹಲವು ಹೋಟೆಲ್‌ಗಳು ತಮ್ಮ ಕಾರ್ಯಚಟುವಟಿಕೆ ನಿಲ್ಲಿಸುವ ಭೀತಿ ಎದುರಿಸುತ್ತಿವೆ. ಈ ಪರಿಸ್ಥಿತಿಯನ್ನು ಎದುರಿಸಲು, ಹೋಟೆಲ್ ಮಾಲೀಕರು ಪರ್ಯಾಯ ಮಾರ್ಗವಾಗಿ ಕಟ್ಟಿಗೆ ಒಲೆಗಳತ್ತ ಮುಖ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿ ನಗರದ ಎಂಜಿ ಮಾರ್ಕೆಟ್‌ನಲ್ಲಿ ಕಟ್ಟಿಗೆ ಒಲೆಗಳ ಬೇಡಿಕೆ ಅನಿರೀಕ್ಷಿತವಾಗಿ ಏರಿಕೆಯಾಗಿದೆ. ಈ ಹಿಂದೆ ಯಾರೂ ಖರೀದಿಸದ ಕಟ್ಟಿಗೆ ಒಲೆಗಳಿಗೆ ಇದೀಗ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಹೋಟೆಲ್ ಮಾಲೀಕರು ಸಾಲುಗಟ್ಟಿ ನಿಂತು ಖರೀದಿ ಮಾಡುತ್ತಿದ್ದಾರೆ. ಬಹುತೇಕ ಹೋಟೆಲ್‌ಗಳು ಮುಚ್ಚುವ ಸ್ಥಿತಿ ತಲುಪಿದ್ದು, ಕನಿಷ್ಠ ಕಟ್ಟಿಗೆ ಒಲೆಯನ್ನಾದರೂ ಬಳಸಿ ವ್ಯವಹಾರ ಮುಂದುವರಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬಂದಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More