ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿಗಳು

Updated on: Nov 22, 2024 | 6:16 PM

ಲಕ್ನೋದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಾರು ಸ್ಕೂಟಿಯನ್ನು ಸುಮಾರು 1 ಕಿ.ಮೀ ಎಳೆದೊಯ್ದಿದೆ. ಈ ವೇಳೆ ಬೆಂಕಿಯ ಕಿಡಿಗಳು ಹೊರಬಿದ್ದಿದ್ದು, ಅಕ್ಕಪಕ್ಕದಲ್ಲಿ ಸಾಗುತ್ತಿದ್ದ ವಾಹನಗಳು ಕಾರು ಚಾಲಕನನ್ನು ಎಚ್ಚರಿಸಲು ಪ್ರಯತ್ನಿಸಿದರೂ ಆತ ಕಾರು ನಿಲ್ಲಿಸಲಿಲ್ಲ.

ಲಕ್ನೋ: ಲಕ್ನೋದಲ್ಲಿ ಹ್ಯುಂಡೈ ಕಾರು ಫ್ಲೈಓವರ್ ಮೇಲೆ ಚಲಿಸುತ್ತಿದ್ದು, ಬೆಂಕಿ ಕಿಡಿಗಳನ್ನು ಸೂಸುತ್ತಾ ಸ್ಕೂಟಿಯನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಪಕ್ಕದಲ್ಲಿದ್ದ ವಾಹನಗಳ ಸವಾರರು ಚಿತ್ರೀಕರಿಸಿದ್ದಾರೆ. ಸ್ಕೂಟರ್ ಕಾರಿನ ಬಾನೆಟ್‌ನಲ್ಲಿ ಸಿಲುಕಿಕೊಂಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ದಾರಿಯಲ್ಲಿದ್ದ ಸಹ ಪ್ರಯಾಣಿಕರು ಕಾರು ಚಾಲಕನಿಗೆ ಕಾರನ್ನು ನಿಲ್ಲಿಸುವಂತೆ ಹೇಳಿದರೂ ಪ್ರಯೋಜನವಾಗಲಿಲ್ಲ. ಈ ಅಪಘಾತದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More