Video: ಕೋಲ್ಕತ್ತಾ ಪ್ರವಾಹದ ನೀರಿನಲ್ಲಿ ಸಿಲುಕಿ ಅನಾಥವಾದ ಐಷಾರಾಮಿ ರೋಲ್ಸ್​​-ರಾಯ್ಸ್​ ಕಾರು

Updated on: Sep 24, 2025 | 2:14 PM

ಕೋಲ್ಕತ್ತಾದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಸ್ಥಿತಿ ಎದುರಾಗಿದೆ. ಪ್ರವಾಹದ ನೀರಿನಲ್ಲಿ ಐಷಾರಾಮಿ ರೋಲ್ಸ್​-ರಾಯ್ಸ್​ ಕಾರು ಸಿಲುಕಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇನ್​ಸ್ಟಾಗ್ರಾಂನಲ್ಲಿ ವೈರಲ್ ಆದ ವಿಡಿಯೋದಲ್ಲಿ ನೀಲಿ ಮತ್ತು ಬಿಳಿ ಬಣ್ಣದ ಕಾರು ನೀರಿನಲ್ಲಿ ಸಿಲುಕಿರುವುದನ್ನು ಕಾಣಬಹುದು. ಮರದ ರೆಂಬೆಗಳು ಕಾರಿನ ಮೇಲೆ ಬಿದ್ದಿರುವುದನ್ನು ಕಾಣಬಹುದು.

ಕೋಲ್ಕತ್ತಾ, ಸೆಪ್ಟೆಂಬರ್ 24: ಕೋಲ್ಕತ್ತಾದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಸ್ಥಿತಿ ಎದುರಾಗಿದೆ. ಪ್ರವಾಹದ ನೀರಿನಲ್ಲಿ ಐಷಾರಾಮಿ ರೋಲ್ಸ್​-ರಾಯ್ಸ್​ ಕಾರು ಸಿಲುಕಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇನ್​ಸ್ಟಾಗ್ರಾಂನಲ್ಲಿ ವೈರಲ್ ಆದ ವಿಡಿಯೋದಲ್ಲಿ ನೀಲಿ ಮತ್ತು ಬಿಳಿ ಬಣ್ಣದ ಕಾರು ನೀರಿನಲ್ಲಿ ಸಿಲುಕಿರುವುದನ್ನು ಕಾಣಬಹುದು. ಮರದ ರೆಂಬೆಗಳು ಕಾರಿನ ಮೇಲೆ ಬಿದ್ದಿರುವುದನ್ನು ಕಾಣಬಹುದು.

ಬೈಕ್​ ಹಾಗೂ ಇತರೆ ಕಾರುಗಳು ಈ ಕಾರಿನ ಸುತ್ತಲೂ ಓಡಾಡುತ್ತಿರುವುದನ್ನು ಕಾಣಬಹುದು. ಕೋಲ್ಕತ್ತಾದಲ್ಲಿ 37 ವರ್ಷಗಳಲ್ಲಿ ಸುರಿದ ಅತಿ ದೊಡ್ಡ ಮಳೆ ಇದಾಗಿದೆ. ಭಾರೀ ಮಳೆಯಿಂದಾಗಿ ನಗರದಲ್ಲಿ ವ್ಯಾಪಕ ಪ್ರವಾಹ ಉಂಟಾಗಿದ್ದು, ಸಾರ್ವಜನಿಕ ಸಾರಿಗೆಯಲ್ಲಿ ತೀವ್ರ ಅಡಚಣೆ ಉಂಟಾಗಿದ್ದು, ಕೆಲವು ಸೇವೆಗಳು ಸ್ಥಗಿತಗೊಂಡಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More