Ma Kamakhya Corridor: ಕಾಶಿ ವಿಶ್ವನಾಥ ಮಾದರಿಯಲ್ಲಿ ಕಾಮಾಖ್ಯ ದೇವಾಲಯ ಕಾರಿಡಾರ್ ಪ್ರಧಾನಿ ಮೋದಿ ಶ್ಲಾಘನೆ
ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರ ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಮಾದರಿಯಲ್ಲಿ ಅಸ್ಸಾಂ ಸರ್ಕಾರವು ಗುವಾಹಟಿಯ ಕಾಮಾಖ್ಯ ದೇವಾಲಯದಲ್ಲಿ ಕಾರಿಡಾರ್ ನಿರ್ಮಿಸಲು ಯೋಜಿಸುತ್ತಿದೆ ಎಂದು ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರ ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಮಾದರಿಯಲ್ಲಿ ಅಸ್ಸಾಂ ಸರ್ಕಾರವು ಗುವಾಹಟಿಯ ಕಾಮಾಖ್ಯ ದೇವಾಲಯದಲ್ಲಿ ಕಾರಿಡಾರ್ ನಿರ್ಮಿಸಲು ಯೋಜಿಸುತ್ತಿದೆ ಎಂದು ಹೇಳಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ನಾಲ್ಕು ನಿಮಿಷಗಳ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಮಾ ಕಾಮಾಖ್ಯ ಕಾರಿಡಾರ್ ಮುಂದಿನ ದಿನಗಳಲ್ಲಿ ಹೇಗೆ ಕಾಣಿಸುತ್ತದೆ ಎಂಬ ವಿವರ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಯ ಕುರಿತು ಹಂಚಿಕೊಂಡ ಪೋಸ್ಟ್ ಅನ್ನು ರೀ ಪೋಸ್ಟ್ ಮಾಡಿದ್ದಾರೆ. ಮಾ ಕಾಮಾಖ್ಯ ಕಾರಿಡಾರ್ ಒಂದು ಹೆಗ್ಗುರುತು. ಕಾಶಿ ವಿಶ್ವನಾಥ ಧಾಮ ಮತ್ತು ಶ್ರೀ ಮಹಾಕಾಲ್ ಮಹಾಲೋಕಗಳು, ಆಧ್ಯಾತ್ಮಿಕ ಅನುಭವವನ್ನು ನೀಡಲು ಇಂದು ರೂಪಾಂತರಗೊಂಡಿವೆ. ಇದರ ಜತೆಗೆ ಇದು ಪ್ರವಾಸೋದ್ಯಮಕ್ಕೂ ಒತ್ತು ನೀಡುತ್ತಿದೆ ಮತ್ತು ಸ್ಥಳೀಯ ಆರ್ಥಿಕತೆ ಉತ್ತೇಜನವನ್ನು ಪಡೆಯುತ್ತದೆ ಎಂದು ಹೇಳಿದ್ದಾರೆ. ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಮತ್ತಷ್ಟು ಜನಪ್ರಿಯವಾಗಿಸುವುದು ಪ್ರಧಾನಿ ಮೋದಿಯವರ ಉದ್ದೇಶವಾಗಿದೆ.