ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ: ಸ್ಕೂಟರ್​​​​​ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದ ಕಾರು

Updated on: Feb 20, 2026 | 12:16 PM

ಮಡಕ್ಕಲ್ ಜಂಕ್ಷನ್‌ನಲ್ಲಿ ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಸ್ತೆ ದಾಟುತ್ತಿದ್ದ ಸ್ಕೂಟರ್ ಸವಾರ ಮಹಿಳೆಗೆ ವೇಗವಾಗಿ ಬಂದ ಕೆಂಪು ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮಹಿಳೆ ಗಾಳಿಯಲ್ಲಿ ಹಾರಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ಸುರಕ್ಷತೆಯ ಮಹತ್ವವನ್ನು ಈ ಘಟನೆ ಎತ್ತಿ ತೋರಿಸುತ್ತದೆ.

ಕೇರಳ ಫೆ.20: ಮಡಕ್ಕಲ್ ಜಂಕ್ಷನ್‌ನಲ್ಲಿ (Madakkal Junction) ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಕೂಟರ್​​​​​ನಲ್ಲಿ ಬಂದ ಮಹಿಳೆಯೊಬ್ಬರಿಗೆ ರಸ್ತೆ ಕ್ರಾಸ್​​ ಮಾಡುವ ವೇಳೆ, ವೇಗವಾಗಿ ಬಂದ ಕೆಂಪು ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವಿಡಿಯೋ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More