Karnataka Assembly Polls: ಟಿಕೆಟ್ ಸಿಗುವ ವಿಶ್ವಾಸದಲ್ಲಿ ಪ್ರಚಾರ ಅರಂಭಿಸಿರುವ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಮಾಡಾಳ್

|

Updated on: Apr 10, 2023 | 10:39 AM

ಪಕ್ಷ ಮತ್ತು ರಾಜ್ಯದ ಬಿಜೆಪಿ ನಾಯಕರ ಮೇಲೆ ಮಲ್ಲಿಕಾರ್ಜುನ್​ಗೆ ಇರುವ ವಿಶ್ವಾಸ ಮತ್ತು ಭರವಸೆ ದಿಗಿಲು ಮೂಡಿಸುತ್ತದೆ.

ದಾವಣಗೆರೆ: ಭ್ರಷ್ಟಾಚಾದ (corruption) ಆರೋಪ ಎದುರಿಸುತ್ತಿರುವ ಜಿಲ್ಲೆಯ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪವರು (Madal Virupakshappa) ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಅವರ ಪುತ್ರ ಮತ್ತು ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ಕೂಡ ವಿಚಾರಣೆ ಎದುರಿಸುತ್ತಿದ್ದಾರೆ. ಅಷ್ಟಾಗಿಯೂ ಶಾಸಕರ ಎರಡನೇ ಪುತ್ರ ಮಲ್ಲಿಕಾರ್ಜುನ ಮಾಡಾಳ್ (Mallikarjun Madal) ತಮ್ಮ ತಂದೆಯ ಕ್ಷೇತ್ರದಲ್ಲಿ ತನಗೆ ಟಕೆಟ್ ಸಿಗುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಮತ್ತು ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಮೊದಲೇ ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. ಪಕ್ಷ ಮತ್ತು ರಾಜ್ಯದ ಬಿಜೆಪಿ ನಾಯಕರ ಮೇಲೆ ಮಲ್ಲಿಕಾರ್ಜುನ್​ಗೆ ಇರುವ ವಿಶ್ವಾಸ ಮತ್ತು ಭರವಸೆ ದಿಗಿಲು ಮೂಡಿಸುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 10, 2023 10:36 AM