ಕ್ವಾರಿ ದುರಂತ: ಐವರು ಕಾರ್ಮಿಕರ ಸ್ಥಿತಿ ಗಂಭೀರ, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Edited By:

Updated on: Jul 02, 2026 | 12:02 PM

ಮುಖ್ಯಾಂಶಗಳು

  • ಮಾದಪಟ್ಟಣ ಕಾವೇರಿ ಕ್ರಷರ್‌ನಲ್ಲಿ ದುರಂತ ಪ್ರಕರಣ
  • 7 ಜನ ಸಾವು, ಗಾಯಗೊಂಡಿರುವ ಐವರ ಸ್ಥಿತಿ ಗಂಭೀರ
  • ರಕ್ತಸ್ರಾವದಿಂದ ಪ್ರಜ್ಞೆ ಕಳೆದುಕೊಂಡ ಕೂಲಿ ಕಾರ್ಮಿಕರು

ಮಾದಪಟ್ಟಣ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಬಂಡೆ ಕುಸಿತ ದುರಂತದಲ್ಲಿ ಐವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ದುರಂತದಲ್ಲಿ ಏಳು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ತರಲಾಗಿದೆ. ಗಾಯಾಳುಗಳು ಉತ್ತರ ಭಾರತ ಮೂಲದವರು ಎಂದು ತಿಳಿದುಬಂದಿದೆ.

ರಾಮನಗರ, ಜುಲೈ 02: ಮಾದಪಟ್ಟಣ ಸಮೀಪದ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತದಲ್ಲಿ 7 ಜನ ಮೃತಪಟ್ಟಿದ್ದರೆ, ಗಂಭೀವಾಗಿ ಗಾಯಗೊಂಡ ಐವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಇವರನ್ನು ಮೈಸೂರು ರಸ್ತೆಯಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳು ಕಾರ್ಮಿಕರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಕೈ ಕಾಲುಗಳು, ಹಣೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ರಕ್ತಸ್ರಾವದಿಂದಾಗಿ ಅವರು ಪ್ರಜ್ಞೆ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 02, 2026 11:59 AM
Follow Us