Madduru Stone pelting: ವಿದೇಶದಿಂದಲೇ ಜನತೆಗೆ ಮದ್ದೂರು ಶಾಸಕ ಉದಯ್ ಮಹತ್ವದ ಸಂದೇಶ
ಮದ್ದೂರು ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಿಂದೂ ಕಾರ್ಯಕರ್ತ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ನಾಳೆ(ಸೆಪ್ಟೆಂಬರ್ 09) ಮದ್ದೂರು ಬಂದ್ ಗೆ ಕರೆ ಕೊಟ್ಟಿದ್ದು, ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿವೆ. ಇನ್ನೊಂದೆಡೆ ವಿದೇಶ ಪ್ರವಾಸದಲ್ಲಿರುವ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಪ್ರತಿಕ್ರಿಯಿಸಿದ್ದು, ಎಲ್ಲರೂ ಶಾಂತಿಯನ್ನ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಮಂಡ್ಯ, (ಸೆಪ್ಟೆಂಬರ್ 08): ಮದ್ದೂರು ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಿಂದೂ ಕಾರ್ಯಕರ್ತ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ನಾಳೆ(ಸೆಪ್ಟೆಂಬರ್ 09) ಮದ್ದೂರು ಬಂದ್ ಗೆ ಕರೆ ಕೊಟ್ಟಿದ್ದು, ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿವೆ. ಇನ್ನೊಂದೆಡೆ ವಿದೇಶ ಪ್ರವಾಸದಲ್ಲಿರುವ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಪ್ರತಿಕ್ರಿಯಿಸಿದ್ದು, ಎಲ್ಲರೂ ಶಾಂತಿಯನ್ನ ಕಾಪಾಡುವಂತೆ ಮನವಿ ಮಾಡಿದ್ದಾರೆ.
ವಿದೇಶದಿಂದಲೇ ವಿಡಿಯೋ ಸಂದೇಶ ನೀಡಿರುವ ಮದ್ದೂರು ಶಾಸಕ ಕದಲೂರು ಉದಯ್, ನಿನ್ನೆ ನಡೆದ ಅಹಿತಕರ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಈ ಘಟನೆಯನ್ನ ನಾನು ಖಂಡಿಸುತ್ತೇನೆ. ಘಟನೆ ಹಿಂದೆ ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಯಾರು ಆತಂಕಕ್ಕೆ ಒಳಗಾಗುವುದು ಬೇಡ. ಯಾರು ಉದ್ವೇಗಕ್ಕೆ ಒಳಗಾಗಬೇಡಿ. ನಮ್ಮ ತಾಲೂಕಿನ ಜನತೆ ಶಾಂತಿ ಪ್ರಿಯರು. ಆಗಿರುವ ಘಟನೆಯನ್ನ ಸರಿಪಡಿಸಿಕೊಳ್ಳೋಣಾ. ತಪ್ಪಿತಸ್ಥರನ್ನ ಸೆದೆಬಡಿದು ನ್ಯಾಯ ಕೊಡಿಸುವ ಕೆಲಸ ಮಾಡ್ತೇವೆ. ನಿಮ್ಮ ಜೊತೆ ನಾವು ಯಾವಾಗಲೂ ಇರುತ್ತೇವೆ. ಎಲ್ಲರೂ ಶಾಂತಿಯನ್ನ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

