Madduru Stone pelting: ವಿದೇಶದಿಂದಲೇ ಜನತೆಗೆ ಮದ್ದೂರು ಶಾಸಕ ಉದಯ್ ಮಹತ್ವದ ಸಂದೇಶ

Updated on: Sep 08, 2025 | 5:32 PM

ಮದ್ದೂರು ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಿಂದೂ ಕಾರ್ಯಕರ್ತ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ನಾಳೆ(ಸೆಪ್ಟೆಂಬರ್ 09) ಮದ್ದೂರು ಬಂದ್​ ಗೆ ಕರೆ ಕೊಟ್ಟಿದ್ದು, ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿವೆ. ಇನ್ನೊಂದೆಡೆ ವಿದೇಶ ಪ್ರವಾಸದಲ್ಲಿರುವ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಪ್ರತಿಕ್ರಿಯಿಸಿದ್ದು, ಎಲ್ಲರೂ ಶಾಂತಿಯನ್ನ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಮಂಡ್ಯ, (ಸೆಪ್ಟೆಂಬರ್ 08): ಮದ್ದೂರು ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಿಂದೂ ಕಾರ್ಯಕರ್ತ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ನಾಳೆ(ಸೆಪ್ಟೆಂಬರ್ 09) ಮದ್ದೂರು ಬಂದ್​ ಗೆ ಕರೆ ಕೊಟ್ಟಿದ್ದು, ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿವೆ. ಇನ್ನೊಂದೆಡೆ ವಿದೇಶ ಪ್ರವಾಸದಲ್ಲಿರುವ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಪ್ರತಿಕ್ರಿಯಿಸಿದ್ದು, ಎಲ್ಲರೂ ಶಾಂತಿಯನ್ನ ಕಾಪಾಡುವಂತೆ ಮನವಿ ಮಾಡಿದ್ದಾರೆ.

ವಿದೇಶದಿಂದಲೇ ವಿಡಿಯೋ ಸಂದೇಶ ನೀಡಿರುವ ಮದ್ದೂರು ಶಾಸಕ ಕದಲೂರು ಉದಯ್, ನಿನ್ನೆ ನಡೆದ ಅಹಿತಕರ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಈ ಘಟನೆಯನ್ನ ನಾನು ಖಂಡಿಸುತ್ತೇನೆ. ಘಟನೆ ಹಿಂದೆ ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಯಾರು ಆತಂಕಕ್ಕೆ ಒಳಗಾಗುವುದು ಬೇಡ. ಯಾರು ಉದ್ವೇಗಕ್ಕೆ ಒಳಗಾಗಬೇಡಿ. ನಮ್ಮ ತಾಲೂಕಿನ ಜನತೆ ಶಾಂತಿ ಪ್ರಿಯರು. ಆಗಿರುವ ಘಟನೆಯನ್ನ ಸರಿಪಡಿಸಿಕೊಳ್ಳೋಣಾ. ತಪ್ಪಿತಸ್ಥರನ್ನ ಸೆದೆಬಡಿದು ನ್ಯಾಯ ಕೊಡಿಸುವ ಕೆಲಸ ಮಾಡ್ತೇವೆ. ನಿಮ್ಮ ಜೊತೆ ನಾವು ಯಾವಾಗಲೂ ಇರುತ್ತೇವೆ. ಎಲ್ಲರೂ ಶಾಂತಿಯನ್ನ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More