ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ, ವಿಡಿಯೋ ನೋಡಿ

Edited By:

Updated on: Nov 24, 2026 | 3:29 PM

ಮುಖ್ಯಾಂಶಗಳು

  • ಕೆಡಿಪಿ ಸಭೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ನಾಮಫಲಕ ತೆಗೆಸಿದ ಕೈ ಶಾಸಕ ಉದಯ್
  • ಇಂದು ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ ಕೆಡಿಪಿ ಸಭೆಯಲ್ಲಿ ನಡೆದ ಘಟನೆ
  • ಕುಮಾರಸ್ವಾಮಿ ಮಂಡ್ಯ ಸಂಸದರಾಗಿರುವ ಹಿನ್ನಲೆಯಲ್ಲಿ ಶಿಷ್ಟಾಚಾರದ ಪ್ರಕಾರ ನಾಮಫಲಕ ಇಟ್ಟಿದ್ದ ಅಧಿಕಾರಿಗಳು

ಮಂಡ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ರಾಜಕೀಯ ಮುಸುಕಿನ ಗುದ್ದಾಟ ಮುಂದುವರೆದಿದೆ. ಇದಕ್ಕೆ ಪೂರಕವೆಂಬಂತೆ ಮದ್ದೂರಿನ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಅವರು ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿಯವರ ನಾಮಫಲಕವನ್ನು ತೆಗೆಸಿರುವ ಪ್ರಸಂಗ ನಡೆದಿದೆ. ಹೌದು....ಕೆಲಸಕ್ಕೆ ಬಾರದವರೆಂದು ಕೆಡಿಪಿ ಸಭೆಯಲ್ಲಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಯವರ ನಾಮಫಲಕ ತೆಗೆಸಿದ್ದಾರೆ

ಮಂಡ್ಯ, ನವೆಂಬರ್ 24: ಮಂಡ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ರಾಜಕೀಯ ಮುಸುಕಿನ ಗುದ್ದಾಟ ಮುಂದುವರೆದಿದೆ. ಇದಕ್ಕೆ ಪೂರಕವೆಂಬಂತೆ ಮದ್ದೂರಿನ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಅವರು ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿಯವರ ನಾಮಫಲಕವನ್ನು ತೆಗೆಸಿರುವ ಪ್ರಸಂಗ ನಡೆದಿದೆ. ಹೌದು….ಕೆಲಸಕ್ಕೆ ಬಾರದವರೆಂದು ಕೆಡಿಪಿ ಸಭೆಯಲ್ಲಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಯವರ ನಾಮಫಲಕ ತೆಗೆಸಿದ್ದಾರೆ. ಇಂದು (ನವೆಂಬರ್ 24) ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ ನಡೆಯುತ್ತಿರುವ ಕೆಡಿಪಿ ಸಭೆ ನಡೆದಿದ್ದು, ಕುಮಾರಸ್ವಾಮಿ ಮಂಡ್ಯ ಸಂಸದರಾಗಿರುವ ಹಿನ್ನಲೆಯಲ್ಲಿ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳು, ಟೇಬಲ್ ಮೇಲೆ ಅವರ ನಾಮಫಲಕ ಇಟ್ಟಿದ್ದರು. ಇದನ್ನು ಕಂಡ ಶಾಸಕ ಉದಯ್, ಯಾರೋ ಕೆಲಸಕ್ಕೆ ಬಾರದವರ ನಾಮಫಲಕ ಇಟ್ಟಿದ್ದೀರಾ ಎಂದು ಗರಂ ಆಗಿ ಹೇಳಿದ್ದಾರೆ. ಕೂಡಲೇ ಅಧಿಕಾರಿಗಳು ಓಡೋಡಿ ಬಂದು ಎಚ್‌ಡಿಕೆ ನಾಮಫಲಕ ತೆಗೆದರು. ಬಳಿಕ ಅದೇ ಸೀಟಿನಲ್ಲಿ ಶಾಸಕರು ಕುಳಿತುಕೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 24, 2026 03:10 PM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More