AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: ಯತ್ನಾಳ್​ ಗೆ ಫುಲ್ ಡಿಮ್ಯಾಂಡ್

ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: ಯತ್ನಾಳ್​ ಗೆ ಫುಲ್ ಡಿಮ್ಯಾಂಡ್

ರಮೇಶ್ ಬಿ. ಜವಳಗೇರಾ
|

Updated on: Sep 08, 2025 | 4:21 PM

Share

ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದರಿಂದ ಮಂಡ್ಯದ ಮದ್ದೂರು ಪಟ್ಟಣ ಉದ್ವಿಗ್ನವಾಗಿದ್ದು, ಕಲ್ಲು ತೂರಾಟ ಖಂಡಿಸಿ ಹಿಂದೂ ಪರ ಸಂಘಟನೆಗಳು ನಾಳೆ (ಸೆಪ್ಟೆಂಬರ್ 09) ಮದ್ದೂರು ಬಂದ್​​ ಗೆ ಕರೆ ನೀಡಿವೆ. ಇನ್ನು ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸಹ ಬೆಂಬಲ ಸೂಚಿಸಿದೆ. ಇನ್ನು ಮದ್ದೂರಿನಲ್ಲಿ ಠಿಕಾಣಿ ಹೂಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಪ್ರತಿಭಟನಾ ಸಭೆಯಲ್ಲಿ ಕಲ್ಲು ತೂರಿದವರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಕರ್ತರು ಯತ್ನಾಳ್ ಯತ್ನಾಳ್ ಎಂದು ಕೂಗಿದ್ದಾರೆ. ಈ ವೇಳೆ ಸಿಂಹ, ಯತ್ನಾಳ್ ಅವರನ್ನು ಇಲ್ಲಿಗೆ ಕರೆಸೋಣ‌ ಎಂದು ಸಮಾಧಾನಪಡಿಸಿದರು.

ಮಂಡ್ಯ, (ಸೆಪ್ಟೆಂಬರ್ 08): ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದರಿಂದ ಮಂಡ್ಯದ ಮದ್ದೂರು ಪಟ್ಟಣ ಉದ್ವಿಗ್ನವಾಗಿದ್ದು, ಕಲ್ಲು ತೂರಾಟ ಖಂಡಿಸಿ ಹಿಂದೂ ಪರ ಸಂಘಟನೆಗಳು ನಾಳೆ (ಸೆಪ್ಟೆಂಬರ್ 09) ಮದ್ದೂರು ಬಂದ್​​ ಗೆ ಕರೆ ನೀಡಿವೆ. ಇನ್ನು ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸಹ ಬೆಂಬಲ ಸೂಚಿಸಿದೆ. ಇನ್ನು ಮದ್ದೂರಿನಲ್ಲಿ ಠಿಕಾಣಿ ಹೂಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಪ್ರತಿಭಟನಾ ಸಭೆಯಲ್ಲಿ ಕಲ್ಲು ತೂರಿದವರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಕರ್ತರು ಯತ್ನಾಳ್ ಯತ್ನಾಳ್ ಎಂದು ಕೂಗಿದ್ದಾರೆ. ಈ ವೇಳೆ ಸಿಂಹ, ಯತ್ನಾಳ್ ಅವರನ್ನು ಇಲ್ಲಿಗೆ ಕರೆಸೋಣ‌ ಎಂದು ಸಮಾಧಾನಪಡಿಸಿದರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More