ಪಾಕಿಸ್ತಾನಕ್ಕೆ ಜೈ ಅಂದ್ರೆ ಅಲ್ಲೇ ಎನ್​ಕೌಂಟರ್, ಬಾಯಿಗೆ ಗುಂಡಿಕ್ಕಿ ಢಂ ಅನ್ನಿಸ್ಬೇಕು: ಮದ್ದೂರಿನಲ್ಲಿ ಯತ್ನಾಳ್ ರೋಷಾವೇಷ

Updated on: Sep 12, 2025 | 8:58 AM

ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಗಲಭೆ ಮತ್ತು ಹಿಂಸಾಚಾರದ ನಂತರದ ಉದ್ವಿಗ್ನ ಪರಿಸ್ಥಿತಿಯಲ್ಲಿ, ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿ ಆಕ್ರೋಶದ ಮಾತುಗಳನ್ನಾಡಿದರು. ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ಅಲ್ಲಲ್ಲೇ ಗುಂಡಿಕ್ಕಿ ಸಾಯಿಸಬೇಕು ಎಂದರು. ವಿಡಿಯೋ ಇಲ್ಲಿದೆ ನೋಡಿ.

ಮಂಡ್ಯ, ಸೆಪ್ಟೆಂಬರ್ 12: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದು ಗಲಭೆಗೆ ಕಾರಣವಾಗಿದ್ದ ಮಂಡ್ಯ ಜಿಲ್ಲೆಯ ಮದ್ದೂರಿಗೆ ಗುರುವಾರ ಭೇಟಿ ನೀಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರೋಷಾವೇಶದ ಮಾತುಗಳನ್ನಾಡಿದ್ದಾರೆ. ಯಾರು ಹಿಂದೂ, ಕ್ರಿಶ್ಚಿಯನ್, ಸಿಖ್ ಹಾಗೂ ಇತರರನ್ನು ಕೊಲೆ ಮಾಡುತ್ತಾರೋ ಅವರಿಗೆ ಸ್ವರ್ಗದಲ್ಲಿ 72 ಕನ್ಯೆಯರು ಸಿಗುತ್ತಾರೆ ಎನ್ನುತ್ತಾರೆ ಎಂದು ಮುಸ್ಲಿಮರನ್ನು ಉದ್ದೇಶಿಸಿ ಹೇಳಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಯತ್ನಾಳ್, ಈದ್ ಮಿಲಾದ್ ಮೆರವಣಿಗೆ ವೇಳೆ ಯಾರಾದರೂ ಹಿಂದೂಗಳು ಕಲ್ಲು ಹೊಡೆದರೇ ಎಂದು ಪ್ರಶ್ನಿಸಿದರು. ಅಲ್ಲದೆ, ಯಾರು ಪಾಕಿಸ್ತಾನಕ್ಕೆ ಜೈ ಎನ್ನುತ್ತಾರೆಯೋ ಅವರನ್ನು ಅಲ್ಲಲ್ಲೇ ಎನ್​ಕೌಂಟರ್ ಮಾಡಬೇಕು. ಬಾಯಿಗೇ ಬಂದೂಕಿಟ್ಟು ಅಲ್ಲೇ ‘ಢಂ’ ಅನ್ನಿಸಿಬಿಡಬೇಕು ಎಂದು ಯತ್ನಾಳ್ ಗುಡುಗಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More