ಮದ್ದೂರು ಕಲ್ಲು ತೂರಾಟ: ಗಣೇಶೋತ್ಸವ ಮೆರವಣಿಗೆ ವೇಳೆ ನಿಜಕ್ಕೂ ನಡೆದಿದ್ದೇನು? ಮಂಡ್ಯ ಎಸ್ಪಿ ಹೇಳಿದ್ದಿಷ್ಟು
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಬಗ್ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ತಮಿಳುನಾಡು ಕಾಲನಿಯಲ್ಲಿ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ಪ್ರಾರಂಭವಾಯಿತು. ಪೊಲೀಸರು ಘಟನೆಯನ್ನು ನಿಯಂತ್ರಿಸಿ 21 ಜನರನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ನಿಷೇಧಾಜ್ಞೆ ಜಾರಿಯಲ್ಲಿದೆ.
ಮಂಡ್ಯ, ಸೆಪ್ಟೆಂಬರ್ 8: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಾನುವಾರ ರಾತ್ರಿ ಕಲ್ಲು ತೂರಾಟ ಮಾಡಲಾಗಿದೆ. ಈ ವಿಚಾರವಾಗಿ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ತಮಿಳುನಾಡು ಕಾಲನಿಯಿಂದ ಹೊರಟ ಮೆರವಣಿಗೆಯ ಸಂದರ್ಭದಲ್ಲಿ ಒಂದು ಮಸೀದಿಯ ಬಳಿ ಕಲ್ಲು ತೂರಾಟ ನಡೆದಿದೆ. ನಂತರ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದು, ಕರೆಂಟ್ ಕೂಡ ಆಫ್ ಆಯಿತು ಎಂದು ವರದಿಯಾಗಿದೆ ಎಂದಿದ್ದಾರೆ.
ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿದ್ದು, 21 ಜನರನ್ನು ಬಂಧಿಸಲಾಗಿದೆ. ಹೆಚ್ಚಿನ ಆರೋಪಿಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಅವರು ನೀಡಿರುವ ಇನ್ನಷ್ಟು ಮಾಹಿತಿ ತಿಳಿಯಲು ವಿಡಿಯೋ ನೋಡಿ.
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ

