ಮದ್ದೂರು ಕಲ್ಲು ತೂರಾಟ: ಗಣೇಶೋತ್ಸವ ಮೆರವಣಿಗೆ ವೇಳೆ ನಿಜಕ್ಕೂ ನಡೆದಿದ್ದೇನು? ಮಂಡ್ಯ ಎಸ್​ಪಿ ಹೇಳಿದ್ದಿಷ್ಟು

Updated on: Sep 08, 2025 | 10:34 AM

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಬಗ್ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ತಮಿಳುನಾಡು ಕಾಲನಿಯಲ್ಲಿ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ಪ್ರಾರಂಭವಾಯಿತು. ಪೊಲೀಸರು ಘಟನೆಯನ್ನು ನಿಯಂತ್ರಿಸಿ 21 ಜನರನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ನಿಷೇಧಾಜ್ಞೆ ಜಾರಿಯಲ್ಲಿದೆ.

ಮಂಡ್ಯ, ಸೆಪ್ಟೆಂಬರ್ 8: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಾನುವಾರ ರಾತ್ರಿ ಕಲ್ಲು ತೂರಾಟ ಮಾಡಲಾಗಿದೆ. ಈ ವಿಚಾರವಾಗಿ ಮಂಡ್ಯ ಎಸ್​​ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ತಮಿಳುನಾಡು ಕಾಲನಿಯಿಂದ ಹೊರಟ ಮೆರವಣಿಗೆಯ ಸಂದರ್ಭದಲ್ಲಿ ಒಂದು ಮಸೀದಿಯ ಬಳಿ ಕಲ್ಲು ತೂರಾಟ ನಡೆದಿದೆ. ನಂತರ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದು, ಕರೆಂಟ್ ಕೂಡ ಆಫ್ ಆಯಿತು ಎಂದು ವರದಿಯಾಗಿದೆ ಎಂದಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿದ್ದು, 21 ಜನರನ್ನು ಬಂಧಿಸಲಾಗಿದೆ. ಹೆಚ್ಚಿನ ಆರೋಪಿಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಅವರು ನೀಡಿರುವ ಇನ್ನಷ್ಟು ಮಾಹಿತಿ ತಿಳಿಯಲು ವಿಡಿಯೋ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More