ಮದ್ದೂರು: ಮಸೀದಿಯಿಂದಲೇ ಕಲ್ಲು ತೂರಿದ್ದು ನಿಜವಾ? ಐಜಿಪಿ ಹೇಳಿದ್ದೇನು ನೋಡಿ

Updated By: Ganapathi Sharma

Updated on: Sep 09, 2025 | 12:15 PM

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟದ ಬಗ್ಗೆ ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ ಅವರು ಹೇಳಿಕೆ ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. ಈವರೆಗೆ 22 ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಐಜಿಪಿ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ.

ಮಂಡ್ಯ, ಸೆಪ್ಟೆಂಬರ್ 9: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲುತೂರಾಟದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ ಅವರು ಮಾಹಿತಿ ನೀಡಿದ್ದಾರೆ. ಮಸೀದಿ ಕಡೆಯಿಂದಲೇ ಕಲ್ಲು ತೂರಾಟ ನಡೆದಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಲ್ಲು ತೂರಾಟ ಮಾಡಿದ್ದು ಸ್ಪಷ್ಟವಾಗಿದೆ. ಆದರೆ, ಕಲ್ಲುತೂರಾಟದ ಘಟನೆ ನಡೆದ ಸಮಯದಲ್ಲಿ ಬೀದಿ ದೀಪಗಳು ಆಫ್ ಮಾಡಲಾಗಿದ್ದು ಅನುಮಾನಕ್ಕೆ ಕಾರಣವಾಗಿದೆ ಎಂದಿದ್ದಾರೆ. ಘಟನೆ ಪೂರ್ವನಿಯೋಜಿತವೇ ಎಂಬ ಶಂಕೆ ವ್ಯಕ್ತವಾಗಿದ್ದು, ಆ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ. ಈವರೆಗೆ 22 ಜನರನ್ನು ಬಂಧಿಸಲಾಗಿದೆ. ಪೊಲೀಸರು ಹೆಚ್ಚುವರಿ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ