ನಾವೇನು ಪಾಕಿಸ್ತಾನದಲ್ಲಿದ್ದೇವಾ? ಮದ್ದೂರು ಗಲಭೆ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ
ಮದ್ದೂರಿನ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟದ ಘಟನೆಯ ಬಗ್ಗೆ ಬಿಜೆಪಿ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ನಿಷ್ಕ್ರಿಯತೆ ಮತ್ತು ಸರ್ಕಾರದ ಕುಮ್ಮಕ್ಕನ್ನು ಅವರು ಆರೋಪಿಸಿದ್ದಾರೆ. ಈ ಘಟನೆಯನ್ನು ಉಲ್ಲೇಖಿಸಿ ಹಿಂದೂಗಳನ್ನು ಗುರಿಯಾಗಿಸುವ ಪ್ರಯತ್ನಗಳ ಬಗ್ಗೆಯೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 8: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವೇನು ಪಾಕಿಸ್ತಾನದಲ್ಲಿದ್ದೇವಾ ಎಂಬ ಅನುಮಾನ ಬರುವಂತೆ ಈ ಸರ್ಕಾರ ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಕಳೆದ ಎರಡು ವರ್ಷದಿಂದಲೂ ಇದೇ ರೀತಿಯ ಘಟನೆಗಳು ನಡೆಯುತ್ತಾ ಇವೆ. ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರಿನಲ್ಲಿ ಅವರ ಗ್ಯಾಂಗ್ ಬಾಲ ಬಿಚ್ಚಿದೆ. ಅವರೆಲ್ಲ ಸಿಎಂ ಸಿದ್ದರಾಮಯ್ಯ ಸುತ್ತ ಸುತ್ತುಕೊಂಡು ಬಿಟ್ಟಿದ್ದಾರೆ. ಈ ಘಟನೆಗೆ ನೇರ ಕಾರಣ ಸರ್ಕಾರ. ಸರ್ಕಾರದ ಕುಮ್ಮಕ್ಕು ಇಲ್ಲದೆ ಈ ಘಟನೆಗಳು ನಡೆಯುತ್ತಿರಲಿಲ್ಲ. ಸಾರ್ವಜನಿಕ ರಸ್ತೆಯಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮಾಡಿದರೆ ತಪ್ಪೇನು? ಸಾರ್ವಜನಿಕ ರಸ್ತೆ ಇವರಪ್ಪನ ಆಸ್ತಿಯಾ ಎಂದು ಅಶೋಕ್ ಗುಡುಗಿದರು. ಅಶೋಕ್ ಮಾತಿನ ಪೂರ್ತಿ ವಿವರ ವಿಡಿಯೋದಲ್ಲಿದೆ.
